ಕಳಸ ಲೈವ್ ವರದಿ
ತಾಲ್ಲೂಕಿನ ಹೊರನಾಡು ಸಮೀಪದ ಕಪ್ಪಿನಕುಂಬ್ರಿ ನಿವಾಸಿ ಪುರಂದರ (೩೨) ಎಂಬುವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.
ಸೋಮವಾರ ರಾತ್ರಿ ಅವರು ತಮ್ಮ ಮನೆಯ ಕೋಣೆಯಲ್ಲಿ ವಿಷ ಸೇವಿಸಿ ಮೃತಪಟ್ಟಿದ್ದರು ಎನ್ನಲಾಗಿದೆ.
ಮೃತ ಪುರಂದರ ಅವರಿಗೆ ಕಳೆದ ಒಂದು ವರ್ಷದ ಹಿಂದೆಯಷ್ಟೇ ವಿವಾಹವಾಗಿತ್ತು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಏನೆಂದು ಇನ್ನು ತಿಳಿದುಬಂದಿಲ್ಲ. ಪ್ರಕರಣ ಕಳಸ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
