
ಕಳಸ ಲೈವ್ ವರದಿ
ಸಂಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳ್ಳೋಡಿ ಭಾಗದ ಸಾರ್ವಜನಿಕರ ಹಲವು ವರ್ಷಗಳ ಪ್ರಮುಖ ಬೇಡಿಕೆಯಾಗಿದ್ದ ಸುಸಜ್ಜಿತ ರಸ್ತೆ ನಿರ್ಮಾಣದ ಕನಸು ಕೊನೆಗೂ ನನಸಾಗಿದೆ. ತೀವ್ರವಾಗಿ ಹದಗೆಟ್ಟು ಸಂಚಾರಕ್ಕೆ ಯೋಗ್ಯವಿಲ್ಲದಂತಾಗಿದ್ದ ಮಳ್ಳೋಡಿ ಸಂಪರ್ಕ ರಸ್ತೆಯನ್ನು ಭಾರಿ ಅನುದಾನದಲ್ಲಿ ಕಾಂಕ್ರೀಟೀಕರಣಗೊಳಿಸಲಾಗಿದ್ದು, ಶುಕ್ರವಾರದಂದು ಊರಿನ ಗ್ರಾಮಸ್ಥರ ಸಮ್ಮುಖದಲ್ಲಿ ಉದ್ಘಾಟನೆಗೊಂಡಿತು.
ಮಳ್ಳೋಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಶಿಥಿಲಾವಸ್ಥೆ ತಲುಪಿತ್ತು. ರಸ್ತೆಯುದ್ದಕ್ಕೂ ಬಿದ್ದಿದ್ದ ಗುಂಡಿಗಳಿAದಾಗಿ ವಾಹನ ಸವಾರರು, ಶಾಲಾ ಮಕ್ಕಳು ಹಾಗೂ ಅನಾರೋಗ್ಯ ಪೀಡಿತರು ಓಡಾಡಲು ಪ್ರತಿದಿನ ನರಕಯಾತನೆ ಅನುಭವಿಸುವಂತಾಗಿತ್ತು. ಈ ತೊಂದರೆಯನ್ನು ನೀಗಿಸುವಂತೆ ಮಳ್ಳೋಡಿ ಭಾಗದ ಗ್ರಾಮಸ್ಥರು ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ಮುಡಿಗೆರೆ ಕ್ಷೇತ್ರದ ಶಾಸಕಿ ನಯನ ಮೋಟಮ್ಮನವರ ಗಮನಕ್ಕೆ ತಂದು, ಮನವಿ ಸಲ್ಲಿಸಿದ್ದರು.
ಗ್ರಾಮಸ್ಥರ ಸಮಸ್ಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಶಾಸಕಿ ನಯನ ಮೋಟಮ್ಮ ಅವರು, ತಕ್ಷಣವೇ ಸ್ಪಂದಿಸಿ ರಸ್ತೆ ಅಭಿವೃದ್ಧಿಗೆ ವಿಶೇಷ ಮುತುವರ್ಜಿ ವಹಿಸಿದ್ದರು. ಇದರ ಫಲವಾಗಿ ಸರ್ಕಾರದಿಂದ ಬರೋಬ್ಬರಿ 5 ಕೋಟಿ ರೂಪಾಯಿಗಳ ಬೃಹತ್ ಅನುದಾನವನ್ನು ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದರು. ಸದ್ಯ ಈ ಭಾರಿ ಮೊತ್ತದ ವೆಚ್ಚದಲ್ಲಿ ಮಳ್ಳೋಡಿ ರಸ್ತೆಯನ್ನು ಸಂಪೂರ್ಣವಾಗಿ ಕಾಂಕ್ರೀಟೀಕರಣಗೊಳಿಸಲಾಗಿದ್ದು, ಅತ್ಯಂತ ಗುಣಮಟ್ಟದ ಹಾಗೂ ಸುಸಜ್ಜಿತ ರಸ್ತೆ ನಿರ್ಮಾಣಗೊಂಡಿದೆ. ಇದು ಈ ಭಾಗದ ಜನರ ದಶಕಗಳ ಆಸೆ ಈಡೇರಿದಂತಾಗಿದೆ.
ನವೀಕೃತಗೊ0ಡ ಈ ಸುಂದರ ಕಾಂಕ್ರೀಟ್ ರಸ್ತೆಯ ಉದ್ಘಾಟನಾ ಸಮಾರಂಭವು ಶುಕ್ರವಾರ ಅತ್ಯಂತ ್ಲ ನೆರವೇರಿತು. ಊರಿನ ಹಿರಿಯರು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ರಸ್ತೆಯನ್ನು ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲಾಯಿತು.
ಈ ಸಂದರ್ಭದಲ್ಲಿ ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಎ. ಶ್ರೇಣಿಕೆ, ಪ್ರಮುಖ ಕಾಂಗ್ರೆಸ್ ಮುಖಂಡರುಗಳಾದ ಕೆ.ಆರ್. ಪ್ರಭಾಕರ್, ವಿಶ್ವನಾಥ, ವೀರೇಂದ್ರ ಜೈನ್, ಸುಜಿತ್ ಬೆಳ್ಳ, ಉದಯ ಮುಳ್ಳೋಡಿ, ಅಬ್ದುಲ್ ಶುಕುರು, ಸಂಶುದ್ಧೀನ್, ಪ್ರವೀಣ್ ಸಂಸೆ, ಕೆ.ಸಿ. ಮಹೇಶ್, ಶ್ರೀನಿವಾಸ,ರಾಜಪ್ಪ ಗೌಡ ಇತರರು ಉಪಸ್ಥಿತರಿದ್ದರು.
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ರಸ್ತೆ ಸಮಸ್ಯೆಯನ್ನು ಶಾಸಕಿ ನಯನ ಮೋಟಮ್ಮ ಅವರು ಕೇವಲ ಭರವಸೆಗೆ ಸೀಮಿತಗೊಳಿಸದೆ, ಕೋಟ್ಯಂತರ ರೂಪಾಯಿ ಅನುದಾನ ತಂದು ಸುಸಜ್ಜಿತ ಕಾಂಕ್ರೀಟ್ ರಸ್ತೆ ಮಾಡಿಸಿಕೊಟ್ಟಿರುವುದಕ್ಕೆ ಮಳ್ಳೋಡಿ ಗ್ರಾಮಸ್ಥರು ಶಾಸಕರಿಗೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಕಾರ್ಯಕ್ರಮದಲ್ಲಿ ಮಳ್ಳೋಡಿ ಹಾಗೂ ಸಂಸೆ ಭಾಗದ ನೂರಾರು ಗ್ರಾಮಸ್ಥರು ಭಾಗವಹಿಸಿ ಸಂತಸ ಹಂಚಿಕೊAಡರು.
