
ಕಳಸ ಲೈವ್ ವರದಿ
ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ ಐತಿಹಾಸಿಕ ಕ್ಷಣವನ್ನು ಕಳಸ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಸಂಭ್ರಮದಿAದ ಆಚರಿಸಲಾಯಿತು.
ಕಾಂಗ್ರೆಸ್ ಕಾರ್ಯಕರ್ತರು ಕಛೇರಿಯ ಮುಂಭಾಗದಲ್ಲಿ ಬೃಹತ್ ಎಲ್ಇಡಿ ಸ್ಕ್ರೀನ್ ಅಳವಡಿಸಿ, ಪ್ರಮಾಣ ವಚನ ಸ್ವೀಕಾರ ಸಮಾರಂಭದ ನೇರ ಪ್ರಸಾರವನ್ನು ಒಟ್ಟಾಗಿ ವೀಕ್ಷಿಸಿದರು. ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಕಾರ್ಯಕರ್ತರ ಜೈಕಾರ ಹಾಕಿದರು. ನಂತರ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಳಸ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಅವರು ಹೊಸ ಸರ್ಕಾರಕ್ಕೆ ಶುಭ ಹಾರೈಸಿದರು.
“ರಾಜ್ಯದ 25ನೇ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಹೆಮ್ಮೆಯ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಕಳಸ ಬ್ಲಾಕ್ ಕಾಂಗ್ರೆಸ್ ಪಕ್ಷದ ಪರವಾಗಿ ಹಾರ್ದಿಕ ಅಭಿನಂದನೆಗಳು. ರಾಜ್ಯದಲ್ಲಿ ಈ ಅಧಿಕಾರ ಹಸ್ತಾಂತರದ ಕಾರ್ಯಕ್ರಮವು ಯಾವುದೇ ಗೊಂದಲಗಳಿಲ್ಲದೆ, ಅತ್ಯಂತ ಸುಗಮವಾಗಿ ನಡೆಯಲು ತಾವೇ ಮುಂದೆ ನಿಂತು ಮಾರ್ಗದರ್ಶನ ನೀಡಿದ ಸಿದ್ದರಾಮಯ್ಯನವರಿಗೆ ನಮ್ಮ ವಂದನೆಗಳು.ಇವತ್ತಿನ ದಿನಗಳಲ್ಲಿ ಒಬ್ಬ ಗ್ರಾಮ ಪಂಚಾಯಿತಿ ಸದಸ್ಯನಾದವನು ತನ್ನ ಸ್ಥಾನಕ್ಕೆ ರಾಜಿನಾಮೆ ನೀಡಿ ಇನ್ನೊಬ್ಬನಿಗೆ ಬಿಟ್ಟುಕೊಡೋದಿಲ್ಲ.ಅಂತದ್ರಲ್ಲಿ ತನ್ನ ಮುಖ್ಯಮಂತ್ರಿ ಸ್ಥಾನವನ್ನೆ ಬಿಟ್ಟು ಕೊಟ್ಟು ನುಡಿದಂತೆ ನಡೆದ ಒಬ್ಬ ಆದರ್ಶ ರಾಜಕಾರಣಿ ಸಿದ್ದರಾಮಯ್ಯನವರಾಗಿದ್ದಾರೆ.ಇದು ರಾಷ್ಟç ರಾಜಕಾರಣದಲ್ಲಿ ಮಾದರಿಯಾಗಿದೆ ಎಂದು ಹೇಳಿದರು.
ಈ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಮುಖ ಮುಖಂಡರುಗಳಾದ ರಾಜೇಂದ್ರ ಹೆಬ್ಬಾರ್, ರಾಮದೇವ್ ಪಟೇಲ್, ಗಣೇಶ್ ಭಟ್, ಅಬ್ದುಲ್ ಶುಕುರು, ವೀರೇಂದ್ರ ಜೈನ್, ದಿನೇಶ್ ಗೌಡ, ಅನೂಪ್, ಅನಿಲ್ ಬಂಡಾರಿ ಸೇರಿದಂತೆ ಉತ್ಸಾಹಿ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.
