ಕಳಸ ಲೈವ್ ವರದಿ
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ದೊಡ್ಡ ಬದಲಾವಣೆಯೊಂದನ್ನು ತರಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮುಂದಾಗಿದೆ. ಯೋಜನೆ ದುರುಪಯೋಗ ಹಾಗೂ ಅರ್ಹರಲ್ಲದವರಿಗೆ ಹಣ ಸಂದಾಯವಾಗುವುದನ್ನು ತಡೆಯಲು ಇನ್ಮುಂದೆ ‘ಒನ್-ಟೈಮ್ ಬಯೋಮೆಟ್ರಿಕ್’ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ.ಪ್ರಸ್ತುತ ಯೋಜನೆಯ ಲಾಭ ಪಡೆಯುತ್ತಿರುವ ಎಲ್ಲಾ ಫಲಾನುಭವಿಗಳು ತಮ್ಮ ಖಾತೆಯನ್ನು ಬಯೋಮೆಟ್ರಿಕ್ ಹಾಗೂ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆಯೊAದಿಗೆ ಮರು-ನೋಂದಣಿ (ನವೀಕರಣ) ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಒಂದು ವೇಳೆ ನವೀಕರಿಸದಿದ್ದರೆ ಬ್ಯಾಂಕ್ ಖಾತೆಗೆ ಹಣ ಜಮೆಯಾಗುವುದಿಲ್ಲ ಎಂದು ಇಲಾಖೆ ತಿಳಿಸಿದೆ.
ನವೀಕರಣ ಮಾಡಿಕೊಳ್ಳುವುದು ಹೇಗೆ?
ಫಲಾನುಭವಿಗಳು ತಮ್ಮ ಹತ್ತಿರದ ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಿಗೆ ಭೇಟಿ ನೀಡಿ, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಹಾಗೂ ಬಯೋಮೆಟ್ರಿಕ್ ನೀಡುವ ಮೂಲಕ ತಮ್ಮ ಖಾತೆಯನ್ನು ಮರು-ನೋಂದಣಿ ಮಾಡಿಕೊಳ್ಳಬಹುದು.
ಬಯೋಮೆಟ್ರಿಕ್ ತರಲು ಕಾರಣವೇನು?
ಸರ್ಕಾರದ ಪರಿಶೀಲನೆ ವೇಳೆ ಯೋಜನೆಯಲ್ಲಿ ಹಲವು ಲೋಪದೋಷಗಳು ಕಂಡುಬ0ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ಮೃತಪಟ್ಟವರ ಖಾತೆಗೆ ಹಣ: ಗೃಹಲಕ್ಷ್ಮಿ ಯೋಜನೆಯ ಲಕ್ಷಾಂತರ ಮಂದಿ ಫಲಾನುಭವಿಗಳು ನಿಧನರಾಗಿದ್ದಾರೆ. ಸುಮಾರು 2 ಲಕ್ಷ ಮಂದಿ ಮೃತಪಟ್ಟಿದ್ದರೂ ಅವರ ಖಾತೆಗೆ ಹಣ ಜಮೆಯಾಗುತ್ತಿತ್ತು.
ಆದಾಯ ತೆರಿಗೆ ಪಾವತಿದಾರರು: 50 ಸಾವಿರಕ್ಕೂ ಹೆಚ್ಚು ಆದಾಯ ತೆರಿಗೆ ಪಾವತಿದಾರರು ಯೋಜನೆಯ ಲಾಭ ಪಡೆಯುತ್ತಿದ್ದರು.
ಸಾಲಕ್ಕೆ ಜಮೆಯಾಗುತ್ತಿದ್ದ ಹಣ: ಕೆಲ ಫಲಾನುಭವಿಗಳ ಖಾತೆಗೆ ಸಂದಾಯವಾದ ಗೃಹಲಕ್ಷ್ಮಿ ಹಣ, ಅವರು ಈ ಮೊದಲು ಮಾಡಿದ್ದ ಸಾಲದ ಖಾತೆಗೆ ಜಮೆಯಾಗುತ್ತಿತ್ತು.
ಮೊಬೈಲ್ ಸಂಖ್ಯೆ ಬದಲಾವಣೆ: ಕೆಲವರ ಮೊಬೈಲ್ ಸಂಖ್ಯೆಗಳು ಕೂಡ ಬದಲಾಗಿವೆ.
ಗಮನಿಸಿ: ನಿಧನರಾದವರ ಖಾತೆಗೆ ಹಣ ಹೋಗುವುದನ್ನು ತಡೆಯಲು ಮೊದಲು ‘ಜೀವಿತ ಪ್ರಮಾಣ ಪತ್ರ’ ಸಲ್ಲಿಸುವ ನಿಯಮ ತರಲು ಯೋಚಿಸಲಾಗಿತ್ತು. ಆದರೆ ಇದಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಅದಕ್ಕೆ ಪರ್ಯಾಯವಾಗಿ ಈ ‘ಬಯೋಮೆಟ್ರಿಕ್’ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.
ಯಾರಿಗೆ ಗೃಹಲಕ್ಷ್ಮಿ ಹಣ ಸಿಗುವುದಿಲ್ಲ?
ಫಲಾನುಭವಿಗಳು ಎಪಿಎಲ್ ಅಥವಾ ಬಿಪಿಎಲ್ ಕಾರ್ಡ್ ಹೊಂದಿರಬಹುದು, ಆದರೆ ಅವರು ಆದಾಯ ತೆರಿಗೆ ಪಾವತಿದಾರರಾಗಿರಬಾರದು.
ಇಲಾಖೆಯು ಈಗಾಗಲೇ ಸುಮಾರು 2 ಲಕ್ಷಕ್ಕೂ ಅಧಿಕ ಕಾರ್ಡ್ಗಳನ್ನು ಬಿಪಿಎಲ್ನಿಂದ ಎಪಿಎಲ್ಗೆ ವರ್ಗಾವಣೆ ಮಾಡಿದೆ. ಇವರಲ್ಲಿ ಬಹುತೇಕರು ಆದಾಯ ತೆರಿಗೆ ಪಾವತಿಸುತ್ತಿದ್ದರಿಂದ ಕಾರ್ಡ್ ರದ್ದುಪಡಿಸಲಾಗಿದ್ದು, ಇವರಿಗೆ ಗೃಹಲಕ್ಷ್ಮಿ ಯೋಜನೆ ರದ್ದಾಗಲಿದೆ.
“ಸದ್ಯಕ್ಕೆ ನಾವು ಯಾವುದೇ ಫಲಾನುಭವಿಯ ಹೆಸರನ್ನು ನೇರವಾಗಿ ಡಿಲೀಟ್ ಮಾಡುತ್ತಿಲ್ಲ. ಇದು ಕೇವಲ ‘ಒನ್ ಟೈಮ್ ಬಯೋಮೆಟ್ರಿಕ್’ ಪದ್ಧತಿ. ಮಹಿಳೆಯರು ಕೇವಲ ಒಂದು ಬಾರಿ ಬಯೋಮೆಟ್ರಿಕ್ ನೀಡಿದರೆ ಸಾಕು, ಹಣ ಎಂದಿನAತೆ ಖಾತೆಗೆ ಜಮೆಯಾಗುತ್ತದೆ. ನವೀಕರಣ ಮಾಡದ ಖಾತೆಗಳು ಮಾತ್ರ ಸ್ವಯಂಚಾಲಿತವಾಗಿ ರದ್ದಾಗುತ್ತವೆ.”
— ಲಕ್ಷ್ಮಿ ಹೆಬ್ಬಾಳ್ಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ
