ಕಳಸ ಲೈವ್ ವರದಿ
ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಪ್ರತ್ಯೇಕವಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರದೃಷ್ಟಕರ ಘಟನೆಗಳು ವರದಿಯಾಗಿವೆ.
ಮೊದಲ ಘಟನೆಯಲ್ಲಿ, ಕಳಸದ ಕುಂಬಳಡಿಕೆ ಗಂಗನಕೂಡಿಗೆ ನಿವಾಸಿ ಅಲ್ವಿನ್ ಸಂತೋಷ್ ಪಿಂಟೋ (38) ಎಂಬುವವರು ತಮ್ಮ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂತೋಷ್ ವಿವಾಹಿತರಾಗಿದ್ದು, ಅವರು ಇಸ್ರೇಲ್ ದೇಶದಲ್ಲಿ ಉದ್ಯೋಗದಲ್ಲಿದ್ದು, ಇತ್ತೀಚೆಗಷ್ಟೇ ಊರಿಗೆ ಮರಳಿದ್ದರು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮತ್ತೊಂದು ಪ್ರಕರಣದಲ್ಲಿ, ಕಳಸದ ಗಣಪತಿಕಟ್ಟೆ ಕುಂಬಾರಕೆರೆ ನಿವಾಸಿಯಾದ ಸುಮ (59) ಎಂಬ ವಿವಾಹಿತ ಮಹಿಳೆ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಆತ್ಮಹತ್ಯೆಗೂ ನಿಖರವಾದ ಕಾರಣ ತಿಳಿದುಬಂದಿಲ್ಲ.ಪ್ರಕರಣ ಕಳಸ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
