
ಕಳಸ ಲೈವ್ ವರದಿ
ತಾಲೂಕಿನಲ್ಲಿ ಅತ್ಯಧಿಕ ಗಾಳಿ ಮತ್ತು ಮಳೆಯಾಗುತ್ತಿರುವುನ್ನು ಮನಗಂಡು, ಮಕ್ಕಳ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ಕಳಸ ತಾಲೂಕಿನಾದ್ಯಂತ ಜುಲೈ 7, 2026ರ ಮಂಗಳವಾರದAದು ಶಾಲಾಗಳಿಗೆ ರಜೆ ಘೋಷಿಸಲಾಗಿದೆ.
ಕಳಸ ತಾಲೂಕಿನ ತಹಶೀಲ್ದಾರರು ಹೊರಡಿಸಿರುವ ಅಧಿಕೃತ ಪ್ರಕಟಣೆಯ ಪ್ರಕಾರ, ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಹಾಗೂ 1ನೇ ತರಗತಿಯಿಂದ 10ನೇ ತರಗತಿಯವರೆಗಿನ ಎಲ್ಲಾ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಪ್ರಾಥಮಿಕ ಶಾಲೆಗಳಿಗೆ ಜುಲೈ 07-07-2026 ರಂದು ರಜೆಯನ್ನು ಘೋಷಿಸಿ ಆದೇಶ ಹೊರಡಿಸಲಾಗಿದೆ.
ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದ್ದು, ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಮುನ್ನೆಚ್ಚರಿಕೆ ವಹಿಸುವಂತೆ ಕೋರಲಾಗಿದೆ.
