ಕಳಸ ಲೈವ್ ವರದಿ
ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕಾಡುಕೋಣವೊಂದು ಏಕಾಏಕಿ ದಾಳಿ ನಡೆಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಹಿರೇಬೈಲ್ ಬಿಳಗಲಿ ನಸೆಹಡ್ಲು ಎಂಬಲ್ಲಿ ಮಂಗಳವಾರ ನಡೆದಿದೆ.
ಸ್ಥಳೀಯ ನಿವಾಸಿ ಶೀಲಾ (52) ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.
ಶೀಲಾ ಅವರು ಮಂಗಳವಾರ ತಮ್ಮದೇ ತೋಟದಲ್ಲಿ ಎಂದಿನAತೆ ಕೆಲಸ ಮಾಡುತ್ತಿದ್ದರು. ಈ ವೇಳೆ ಕಾಡುಕೋಣವು ಅವರ ಮೇಲೆ ಭೀಕರವಾಗಿ ದಾಳಿ ನಡೆಸಿದೆ. ದಾಳಿಯ ರಭಸಕ್ಕೆ ಕಾಡುಕೋಣವು ಮಹಿಳೆಯ ಎದೆ ಹಾಗೂ ಬೆನ್ನಿನ ಭಾಗಕ್ಕೆ ಗಂಭೀರವಾಗಿ ತಿವಿದಿದೆ ಎನ್ನಲಾಗಿದೆ.
ದಾಳಿಯಿಂದ ತೀವ್ರ ರಕ್ತಸ್ರಾವವಾಗಿ ಕಂಗೆಟ್ಟಿದ್ದ ಅವರನ್ನು ತಕ್ಷಣವೇ ತೋಟದಿಂದ ಕಳಸದ ಸರ್ಕಾರಿ ಆಸ್ಪತ್ರೆಗೆ ಕರೆತರಲಾಯಿತಾದರೂ, ಆಸ್ಪತ್ರೆಗೆ ತಲುಪುವ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.
ಮೃತ ಮಹಿಳೆಯು ಪತಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
