ಕಳಸ ಲೈವ್ ವರದಿ
ಕಳಸ ತಾಲೂಕಿನ ಆಟೋ ಚಾಲಕರು ಮತ್ತು ಮಾಲೀಕರ ಸಂಘದ ನೂತನ ಅಧ್ಯಕ್ಷರಾಗಿ ಪೂರ್ಣೇಶ್ ಕೆ.ಬಿ. ಗಣಪತಿಕಟ್ಟೆ ಹಾಗೂ ಉಪಾಧ್ಯಕ್ಷರಾಗಿ ಸಂತೋಷ್ ಜಿ. ಗಣಪತಿಕಟ್ಟೆ ಅವರನ್ನು ಆಯ್ಕೆ ಮಾಡಲಾಯಿತು.
ಕಳಸದಲ್ಲಿ ನಡೆದ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಗೌರವ ಕಾರ್ಯದರ್ಶಿಯಾಗಿ ಅನಂತ್ ಎಲ್. ಕಲ್ಮಕ್ಕಿ, ಕಾರ್ಯದರ್ಶಿಯಾಗಿ ಕೃಷ್ಣಪ್ಪ ದೇವರುಗುಡ್ಡ, ಸಹ ಕಾರ್ಯದರ್ಶಿಯಾಗಿ ನಾರಾಯಣ ಕಳಸ ಹಾಗೂ ಖಜಾಂಚಿಯಾಗಿ ಬಸವರಾಜ್ ಕಳಸ ಅವರನ್ನು ಆಯ್ಕೆ ಮಾಡಲಾಯಿತು.
ಇದೇ ವೇಳೆ ಗೌರವಾಧ್ಯಕ್ಷರಾಗಿ ಜಗದೀಶ್ ಭಟ್ ಹಾಗೂ ಆನಂದ ಶೆಟ್ರು ಮಲ್ಲಿಕಾರ್ಜುನ್ ಅವರನ್ನು ನೇಮಕ ಮಾಡಲಾಯಿತು.
ಸಭೆಯಲ್ಲಿ ಸಂಘದ ಮುಂದಿನ ಚಟುವಟಿಕೆಗಳು, ಆಟೋ ಚಾಲಕರ ಸಮಸ್ಯೆಗಳು ಹಾಗೂ ಸಂಘವನ್ನು ಮತ್ತಷ್ಟು ಬಲಪಡಿಸುವ ಕುರಿತು ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಆಟೋ ಚಾಲಕರು, ಮಾಲೀಕರು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.
