ಕಳಸ ಲೈವ್ ವರದಿ
ವಾಹನಗಳ ಮಾಲಿನ್ಯ ಪ್ರಮಾಣವನ್ನು ನಿಖರವಾಗಿ ಪರೀಕ್ಷಿಸಿ ಸರ್ಕಾರದ ನಿಯಮಾನುಸಾರ ಪ್ರಮಾಣಪತ್ರವನ್ನು ನೀಡುವ ಉದ್ದೇಶದಿಂದ ಸುಜಯ ಸದಾನಂದ ಅವರ ಮಾಲಿಕತ್ವದಲ್ಲಿ ಕಳಸದ ಕೆ.ಎಂ. ರಸ್ತೆಯ ಹೆಚ್.ಪಿ ಪೆಟ್ರೋಲ್ ಪಂಪ್ ಸಮೀಪ ಶೇಷಮ್ಮ ವಾಹನ ಮಾಲಿನ್ಯ ತಪಾಸಣಾ ಕೇಂದ್ರವನ್ನು ಕಾರ್ಯಾರಂಭ ಮಾಡಿದೆ.
ಈ ಕೇಂದ್ರದಲ್ಲಿ ಎಲ್ಲಾ ರೀತಿಯ ದ್ವಿಚಕ್ರ, ತ್ರಿಚಕ್ರ, ಕಾರು ಹಾಗೂ ಇತರೆ ವಾಹನಗಳಿಗೆ ಅತ್ಯಾಧುನಿಕ ಯಂತ್ರೋಪಕರಣಗಳ ಮೂಲಕ ಮಾಲಿನ್ಯ ಪರೀಕ್ಷೆ ನಡೆಸಲಾಗುತ್ತದೆ. ಸರ್ಕಾರದ ಮಾನ್ಯತೆ ಪಡೆದ ಪ್ರಮಾಣ ಪತ್ರವನ್ನು ತ್ವರಿತವಾಗಿ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ.
ವಾಹನಗಳ ಮಾಲಿನ್ಯ ಪ್ರಮಾಣವನ್ನು ನಿಯಮಿತವಾಗಿ ಪರೀಕ್ಷಿಸಿಕೊಳ್ಳುವುದರಿಂದ ಪರಿಸರ ಸಂರಕ್ಷಣೆಗೆ ಸಹಕಾರಿಯಾಗುವುದರ ಜೊತೆಗೆ ಸಂಚಾರ ಇಲಾಖೆಯ ನಿಯಮಗಳನ್ನು ಪಾಲಿಸಲು ಸಹ ನೆರವಾಗುತ್ತದೆ. ಆದ್ದರಿಂದ ವಾಹನ ಮಾಲೀಕರು ತಮ್ಮ ವಾಹನಗಳ ಮಾಲಿನ್ಯ ಪರೀಕ್ಷೆಯನ್ನು ನಿಗದಿತ ಅವಧಿಯಲ್ಲಿ ಮಾಡಿಸಿಕೊಳ್ಳುವಂತೆ ಕೇಂದ್ರದ ವತಿಯಿಂದ ಮನವಿ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ 9480262114 ಸಂಖ್ಯೆಯನ್ನು ಸಂಪರ್ಕಿಸಬಹುದು

