ಕಳಸ ಲೈವ್ ವರದಿ
ಕಳೆದ ಒಂದು ವಾರದಿಂದ ನಾಪತ್ತೆಯಾಗಿದ್ದ ಬಣಕಲ್ ಸುಭಾಶ್ ನಗರದ ನಿವಾಸಿ ಹೆಚ್.ಎಂ. ಸತೀಶ್ (೬೨) ಎಂಬುವವರು ಹಳುವಳ್ಳಿ ಸಮೀಪದ ತೋಟವೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮೃತ ಸತೀಶ್ ಅವರು ಕಳೆದ ಸೋಮವಾರ ಕಳಸದ ಹಳುವಳ್ಳಿ ಬಳಿಯ ಕೊಂಡದಮನೆ ಎಂಬಲ್ಲಿ ತಮ್ಮ ಬೈಕ್ ನಿಲ್ಲಿಸಿ ಅಂದಿನಿ0ದಲೇ ಕಾಣೆಯಾಗಿದ್ದರು. ಅವರ ಸುಳಿವು ಸಿಗದೆ ಇದ್ದುದರಿಂದ ಕುಟುಂಬಸ್ಥರು ಕಳೆದ ಒಂದು ವಾರದಿಂದ ತೀವ್ರ ಹುಡುಕಾಟ ನಡೆಸಿದ್ದರು. ಆದರೂ ಯಾವುದೇ ಮಾಹಿತಿ ಲಭ್ಯವಾಗದೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು.ಈ ಬಗ್ಗೆ ಕಳೆದ ಮೂರು ದಿನಗಳ ಹಿಂದೆ ಬಣಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು.
ಶನಿವಾರ ರಾತ್ರಿ ಹಳುವಳ್ಳಿ ಸಮೀಪದ ತೋಟವೊಂದರಲ್ಲಿ ತೀವ್ರ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ತೋಟದ ಮಾಲಿಕರು ಜಾಗವನ್ನು ಪರಿಶೀಲಿಸಿದ್ದಾರೆ. ಈ ವೇಳೆ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಕೊಳೆತು ಹೋಗಿದ್ದ ಮೃತದೇಹ ಕಂಡುಬAದಿದೆ.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಕುಟುಂಬಸ್ಥರು ಶವವನ್ನು ಗುರುತಿಸಿದ್ದಾರೆ. ಬಳಿಕ ಮೃತದೇಹವನ್ನು ಕಳಸ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ.
ಈ ಘಟನೆಗೆ ನಿಖರ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ಈ ಕುರಿತು ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
