ಕಳಸ ಲೈವ್ ವರದಿ
2026ನೇ ಸಾಲಿನ ಜುಲೈನಲ್ಲಿ ನಡೆದ ಅಖಿಲ ಭಾರತ ವೃತ್ತಿ ಪರೀಕ್ಷೆಯಲ್ಲಿ ಸಂಸೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಶೇ.100ರಷ್ಟು ಫಲಿತಾಂಶ ದಾಖಲಿಸಿದೆ.
ಸಂಸ್ಥೆಯಲ್ಲಿ ವಿವಿಧ ವೃತ್ತಿ ವಿಭಾಗಗಳಲ್ಲಿ ಪರೀಕ್ಷೆಗೆ ಹಾಜರಾದ 177 ವಿದ್ಯಾರ್ಥಿಗಳೂ ಉತ್ತೀರ್ಣರಾಗುವ ಮೂಲಕ ಶೇ.100 ಫಲಿತಾಂಶ ಸಾಧಿಸಿದ್ದಾರೆ. ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್, ಮೆಕ್ಯಾನಿಕ್ ಡೀಸೆಲ್, ವೆಲ್ಡರ್ ಸೇರಿದಂತೆ ಒಟ್ಟು 10 ವೃತ್ತಿ ವಿಭಾಗಗಳಲ್ಲೂ ಶೇ.100ರಷ್ಟು ಫಲಿತಾಂಶ ಬಂದಿದೆ ಎಂದು ಸಂಸ್ಥೆ ಪ್ರಕಟಿಸಿದೆ.
ಸಂಸ್ಥೆಯ ಒಂದನೇ ವರ್ಷದ ಹಾಗೂ ಎರಡನೇ ವರ್ಷದ ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್ ಸೇರಿದಂತೆ ಎಲ್ಲ ವಿಭಾಗಗಳಲ್ಲೂ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.
ಕಳೆದ 34 ವರ್ಷಗಳ ನಂತರ ಶೇ 100 ಫಲಿತಾಂಶ ದೊರಕಿದೆ. ಈ ಸಾಧನೆಗೆ ಕಾರಣರಾದ ಎಲ್ಲಾ ತರಬೇತಿದಾರರು ಹಾಗೂ ಬೋಧಕ ಸಿಬ್ಬಂದಿಗೆ ಸಂಸ್ಥೆಯ ವತಿಯಿಂದ ಅಭಿನಂದನೆ ಸಲ್ಲಿಸಲಾಗಿದ್ದು, ನಿರಂತರ ಮಾರ್ಗದರ್ಶನ, ಗುಣಮಟ್ಟದ ತರಬೇತಿ ಹಾಗೂ ವಿದ್ಯಾರ್ಥಿಗಳ ಪರಿಶ್ರಮದಿಂದ ಈ ಅತ್ಯುತ್ತಮ ಫಲಿತಾಂಶ ಸಾಧ್ಯವಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ
