ತಾಲ್ಲೂಕಿನ ಮರಸಣಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಡೂರಿನಲ್ಲಿ ಶುಕ್ರವಾರ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಭಾರತೀಯ ಕಮ್ಯೂನಿಷ್ಟ್ ಪಕ್ಷದ ಮುಖಂಡರುಗಳು ಕಳಸ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಗಳ ಕೊರತೆಯ ಬಗ್ಗೆ ಗಮನ ಸೆಳೆದಿದ್ದರು.ಆ ಸಂದರ್ಭದಲ್ಲಿ ಆಸ್ಪತ್ರೆಗೆ ಬೇಟಿ ನೀಡಿ ಪರಿಶೀಲನೆ ಮಾಡುವ ಭರವಸೆಯನ್ನು ನೀಡಿದ್ದರು.ಅದರಂತೆ ಎಡೂರಿನಲ್ಲಿ ಸಭೆ ಮುಗಿದ ಕೂಡಲೇ ಕಳಸ ಸರ್ಕಾರಿ ಆಸ್ಪತ್ರೆಗೆ ಬೇಟಿ ನೀಡಿದ ಜಿಲ್ಲಾಧಿಕಾರಿ ರಮೇಶ್ ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಿ ನಂತರ ಮಾತನಾಡಿದ ಅವರು.ಕಳಸ ಆಸ್ಪತ್ರೆಯಲ್ಲಿ ಸಮಸ್ಯೆಗಳು ಇರುವುದು ನಿಜ.ಉತ್ತಮವಾದ ಆಸ್ಪತ್ರೆಯಲ್ಲಿ ವೈಧ್ಯರ ಕೊರತೆ ಇದೆ.ಈ ಬಗ್ಗೆ ಜಿಲ್ಲಾ ವೈದ್ಯಾದಿಕಾರಿಗಳ ಜೊತೆ ಈಗಾಗಲೇ ಮಾತನಾಡಿದ್ದೇನೆ.ಇಲ್ಲಿಗೆ ಖಾಯಂ ವೈದ್ಯರನ್ನು ನೇಮಕ ಮಾಡಲು ಸರ್ಕಾರಕ್ಕೆ ಪತ್ರವನ್ನು ಬರೆಯುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಿಪಿಐ ಮುಖಂಡರುಗಳಾದ ಗೋಪಾಲ ಶೆಟ್ಟಿ,ರಮೇಶ್ ಕೆಳಗೂರು,ರವಿ ಸುಂಕಸಾಲೆ ಇತರರು ಇದ್ದರು.
