
ಕಳಸ ಲೈವ್ ವರದಿ
ಕಳಸ ಕೃಷಿ ಚಟುವಟಿಕೆಗಳ ಕುರಿತು ವಿದ್ಯಾರ್ಥಿಗಳಲ್ಲಿ ಪ್ರಾಯೋಗಿಕ ಜ್ಞಾನ ಹಾಗೂ ರೈತರ ಶ್ರಮದ ಬಗ್ಗೆ ಗೌರವ ಮೂಡಿಸುವ ಉದ್ದೇಶದಿಂದ ಕಳಸದ ಕೆಪಿಎಸ್ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಿಕಾ ಶಾಲೆಯ ಪರಿಸರ ಸಂಘದ ವತಿಯಿಂದ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಮುಮ್ಮಗೆ ಗ್ರಾಮದ ಶ್ರೀ ಪ್ರಸನ್ನ ಅವರ ಗದ್ದೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉತ್ಸಾಹದಿಂದ ಪಾಲ್ಗೊಂಡು, ಗದ್ದೆಗಿಳಿದು ಭತ್ತದ ಸಸಿಗಳನ್ನು ನಾಟಿ ಮಾಡುವ ಮೂಲಕ ಕೃಷಿ ಚಟುವಟಿಕೆಯ ನೈಜ ಅನುಭವ ಪಡೆದರು.
ಭತ್ತ ನಾಟಿ ಮಾಡುವ ವಿಧಾನ, ಸಸಿಗಳ ಆಯ್ಕೆ, ನಾಟಿಯ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳು ಸೇರಿದಂತೆ ಭತ್ತದ ಕೃಷಿಯ ವಿವಿಧ ಹಂತಗಳ ಕುರಿತು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಮಾಹಿತಿ ನೀಡಲಾಯಿತು. ಇದೇ ಸಂದರ್ಭದಲ್ಲಿ ಕೃಷಿ ಕಾರ್ಯದ ಮಹತ್ವ, ಆಹಾರ ಉತ್ಪಾದನೆಯಲ್ಲಿ ರೈತರ ಪಾತ್ರ ಹಾಗೂ ಕೃಷಿ ಕ್ಷೇತ್ರದಲ್ಲಿ ರೈತರು ಪಡುವ ಶ್ರಮದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.
ಪ್ರತಿದಿನ ಪುಸ್ತಕಗಳಲ್ಲಿ ಕೃಷಿಯ ಬಗ್ಗೆ ಓದುವ ವಿದ್ಯಾರ್ಥಿಗಳು ಇದೇ ಮೊದಲ ಬಾರಿಗೆ ಗದ್ದೆಗಿಳಿದು ಭತ್ತದ ಸಸಿಗಳನ್ನು ನಾಟಿ ಮಾಡಿದ್ದು, ಈ ಅನುಭವ ವಿದ್ಯಾರ್ಥಿಗಳಲ್ಲಿ ವಿಶೇಷ ಸಂತಸ ಮೂಡಿಸಿತು. ಕೃಷಿ ಚಟುವಟಿಕೆಯಲ್ಲಿ ನೇರವಾಗಿ ಭಾಗವಹಿಸಿದ ವಿದ್ಯಾರ್ಥಿಗಳು ಉತ್ಸಾಹದಿಂದ ನಾಟಿ ಕಾರ್ಯದಲ್ಲಿ ತೊಡಗಿಸಿಕೊಂಡರು.

ಕಾರ್ಯಕ್ರಮದಲ್ಲಿ ಕಳಸ ಕೃಷಿ ಇಲಾಖೆ ಹಾಗೂ ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಕೃಷಿ ಮತ್ತು ತೋಟಗಾರಿಕೆ ಕ್ಷೇತ್ರಕ್ಕೆ ಸಂಬAಧಿಸಿದ ಮಾಹಿತಿಯನ್ನು ನೀಡಿದರು.
ಕೃಷಿ ಕೇವಲ ಪಠ್ಯಪುಸ್ತಕದ ವಿಷಯವಲ್ಲ ಅದು ನಮ್ಮ ಬದುಕಿನ ಅವಿಭಾಜ್ಯ ಅಂಗ. ವಿದ್ಯಾರ್ಥಿಗಳು ನೇರವಾಗಿ ಕೃಷಿ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದರಿಂದ ಕೃಷಿಯ ಮಹತ್ವ, ರೈತರ ಶ್ರಮ ಹಾಗೂ ಪರಿಸರದ ಬಗ್ಗೆ ಕಾಳಜಿ ಬೆಳೆಸಿಕೊಳ್ಳಲು ಸಾಧ್ಯ” ಎಂಬ ಆಶಯದೊಂದಿಗೆ ಕಾರ್ಯಕ್ರಮ ನಡೆಯಿತು
