
ಕಳಸ ಲೈವ್ ವರದಿ
ಕರ್ನಾಟಕ ಸರ್ಕಾರ ಶಿಕ್ಷಣ ಇಲಾಖೆಯ ವತಿಯಿಂದ ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ಟೇಕ್ವಾಂಢೋ ಸ್ಪರ್ಧೆಯಲ್ಲಿ ಕಳಸದ ಪ್ರಬೋಧಿನಿ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದು, ಶಾಲೆಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಅಂಡರ್–14 ವಿಭಾಗದ 32ರಿಂದ 35 ಕೆ.ಜಿ. ತೂಕದ ವಿಭಾಗದಲ್ಲಿ ಶ್ರೇಯಸ್ ಅವರು ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಇದೇ ವಿಭಾಗದ 23ರಿಂದ 25 ಕೆ.ಜಿ. ತೂಕದ ವಿಭಾಗದಲ್ಲಿ ಸಂಕೇತ್ ಶೆಟ್ಟಿ ಅವರು ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇನ್ನು 45 ಕೆ.ಜಿ.ಗಿಂತ ಹೆಚ್ಚಿನ ತೂಕದ ಅಂಡರ್–14 ವಿಭಾಗದಲ್ಲಿ ಶಶಿಕುಮಾರ್ ಅವರು ಜಿಲ್ಲಾಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಶಾಲೆಯ ಕ್ರೀಡಾ ಸಾಧನೆಗೆ ಮತ್ತೊಂದು ಗರಿಮೆ ತಂದಿದ್ದಾರೆ.
ಟೇಕ್ವಾ0ಢೋ ಕ್ಷೇತ್ರದಲ್ಲಿ ಪ್ರಬೋಧಿನಿ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು ಇದೇ ಮೊದಲ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದು ಶಾಲೆಯ ಪಾಲಿಗೆ ಹೆಮ್ಮೆಯ ಸಂಗತಿಯಾಗಿದ್ದು, ವಿದ್ಯಾರ್ಥಿಗಳ ಪರಿಶ್ರಮ, ತರಬೇತಿ ಹಾಗೂ ಕ್ರೀಡಾ ಪ್ರೋತ್ಸಾಹಕ್ಕೆ ಸಾಕ್ಷಿಯಾಗಿದೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ, ವಿ ಫಿಟ್ ಅಕಾಡೇಮಿ ಕಳಸದ ಮುಖ್ಯಸ್ಥರು ಹಾಗೂ ತರಬೇತುದಾರರು ಹರ್ಷ ವ್ಯಕ್ತಪಡಿಸಿದ್ದಾರೆ
