
ಕಳಸ ಲೈವ್ ವರದಿ
ಸಂಸೆ ಮೂರ್ನಾಡು ಕ್ಷೇತ್ರದ ಭಗವಾನ್ 1008 ಶ್ರೀ ಪಾರ್ಶ್ವನಾಥ ಸ್ವಾಮಿ, ಶ್ರೀ ಬ್ರಹ್ಮಯಕ್ಷ, ಶ್ರೀ ಮಹಾಮಾತೆ ವರಮಹಾಲಕ್ಷ್ಮೀ ಹಾಗೂ ಶ್ರೀ ಮಹಾಮಾತೆ ಪದ್ಮಾವತಿ ಅಮ್ಮನವರ ದೇವಸ್ಥಾನ ಜಿನಮಂದಿರದ ಶಿಲಾನ್ಯಾಸ ಕಾರ್ಯಕ್ರಮವು ಪಂಚಪೀಠಾಧಿಪತಿಗಳ ಪಾವನ ಸಾನಿಧ್ಯದಲ್ಲಿ ವೈಭವದಿಂದ ನೆರವೇರಿತು.
ಕಾರ್ಕಳ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ, ಕನಕಗಿರಿ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಭುವನಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ, ಅರಹಂತಗಿರಿ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಧವಳಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ, ಎನ್.ಆರ್.ಪುರ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಹಾಗೂ ಆರತಿಪುರ ಜೈನ ಮಠದ ಪರಮಪೂಜ್ಯ ಸ್ವಸ್ತಿಶ್ರೀ ಸಿದ್ಧಾಂತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಅವರು ಕಾರ್ಯಕ್ರಮದಲ್ಲಿ ಪಾವನ ಸಾನಿಧ್ಯ ವಹಿಸಿದ್ದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಶುಭ ಆಶೀರ್ವಾದದೊಂದಿಗೆ, ಡಿ. ಹರ್ಷೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಸುರೇಂದ್ರ ಕುಮಾರ್ ಅವರು ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಸಂಸೆ ಜೈನ ಸಮಾಜದ ಹಿರಿಯರಾದ ಸುದರ್ಶನ್ ಶೆಟ್ಟಿ ಚಾವಡಿಮನೆ, ಜೈನ ತೀರ್ಥಕ್ಷೇತ್ರ ಕಮಿಟಿಯ ಉಪಾಧ್ಯಕ್ಷರಾದ ಸನ್ಮತಿ ಕುಮಾರ್ ಕೊಡಿಗೆಮನೆ, ಕಳಸ ಸೀಮೆಯ ವಿವಿಧ ಬಸದಿಗಳ ಗೌರವಾನ್ವಿತ ಅಧ್ಯಕ್ಷರುಗಳು, ಸಂಸೆ ಸಂತ ಲಾರೆನ್ಸ್ ಚರ್ಚಿನ ಧರ್ಮಗುರುಗಳು, ಕರ್ನಾಟಕ ಜೈನ ಅಸೋಸಿಯೇಷನ್ನ ಉಪಾಧ್ಯಕ್ಷ ರಾಜಕೀರ್ತಿ ಬೆಂಗಳೂರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಶಿಲಾನ್ಯಾಸ ಹಾಗೂ ಧಾರ್ಮಿಕ ಕಾರ್ಯಕ್ರಮದಲ್ಲಿ ಸಂಸೆ ಮೂರ್ನಾಡು ಗ್ರಾಮದ ಪ್ರತಿಯೊಬ್ಬರೂ ಜಾತಿ, ಮತ, ಪಂಥದ ಭೇದವಿಲ್ಲದೆ ಪಾಲ್ಗೊಂಡು ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದರು. ಕಳಸ ಸೀಮೆಯ ಸಮಸ್ತ ಸಮಾಜ ಬಾಂಧವರ ಒಗ್ಗೂಡುವಿಕೆಯೊಂದಿಗೆ ನಡೆದ ಪೂಜಾ ವಿಧಿ ವಿಧಾನಗಳು ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವು ಶ್ರದ್ಧಾಭಕ್ತಿಯಿಂದ ಹಾಗೂ ಅತ್ಯಂತ ಅರ್ಥಪೂರ್ಣವಾಗಿ ಸಂಪನ್ನಗೊAಡಿತು.
ಸAಸೆ ಮೂರ್ನಾಡು ಕ್ಷೇತ್ರದಲ್ಲಿ ಜಿನಮಂದಿರ ನಿರ್ಮಾಣಕ್ಕೆ ನಡೆದ ಈ ಶಿಲಾನ್ಯಾಸ ಕಾರ್ಯಕ್ರಮವು ಜೈನ ಧರ್ಮದ ಪರಂಪರೆ, ಭಕ್ತಿ ಹಾಗೂ ಸರ್ವಧರ್ಮ ಸೌಹಾರ್ದತೆಯ ಸಂದೇಶವನ್ನು ಸಾರುವ ಮಹತ್ವದ ಕಾರ್ಯಕ್ರಮವಾಗಿ ಗಮನ ಸೆಳೆಯಿತು
