ಕಳಸ ಲೈವ್ ವರದಿ
ಕಳಸ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳ ಕ್ಷೇತ್ರವಾರು ಮೀಸಲಾತಿ ವರ್ಗೀಕರಣಕ್ಕೆ ಸಂಬoಧಿಸಿದoತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಶುಕ್ರವಾರ ಕರಡು ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದೆ. ಪ್ರಕಟಿತ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು 10 ದಿನಗಳ ಕಾಲಾವಕಾಶ ನೀಡಲಾಗಿದ್ದು, ಅಕ್ಟೋಬರ್ 19ರಂದು ಸಂಜೆ 5 ಗಂಟೆಯೊಳಗೆ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಕಳಸ ತಾಲೂಕಿನಲ್ಲಿ ಎರಡು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿದ್ದು, ಮಾವಿನಕೆರೆ ಕ್ಷೇತ್ರವನ್ನು ಪರಿಶಿಷ್ಟ ಪಂಗಡಕ್ಕೆ ಹಾಗೂ ಹೊರನಾಡು ಕ್ಷೇತ್ರವನ್ನು ಪರಿಶಿಷ್ಟ ಜಾತಿಗೆ ಮೀಸಲಿಡಲಾಗಿದೆ.
ಇನ್ನು ತಾಲೂಕು ಪಂಚಾಯಿತಿಯಲ್ಲಿ ಒಟ್ಟು ಏಳು ಕ್ಷೇತ್ರಗಳಿದ್ದು, ಅವುಗಳ ಮೀಸಲಾತಿ ವಿವರ ಹೀಗಿದೆ. ಸಂಸೆ ಮತ್ತು ಹೊರನಾಡು ಕ್ಷೇತ್ರಗಳು ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದರೆ, ತನೂಡಿ ಕ್ಷೇತ್ರವನ್ನು ಪರಿಶಿಷ್ಟ ಜಾತಿ ಮಹಿಳೆಗೆ ಹಾಗೂ ಮಾವಿನಕೆರೆ ಕ್ಷೇತ್ರವನ್ನು ಪರಿಶಿಷ್ಟ ಪಂಗಡ ಮಹಿಳೆಗೆ ಮೀಸಲಿಡಲಾಗಿದೆ. ಹೆಮ್ಮಕ್ಕಿ ಕ್ಷೇತ್ರ ಬಿಸಿಎಂ-ಎ ಮಹಿಳೆಗೆ, ಮರಸಣಿಗೆ ಕ್ಷೇತ್ರ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಇಡಕಣಿ ಕ್ಷೇತ್ರವನ್ನು ಸಾಮಾನ್ಯ ವರ್ಗಕ್ಕೆ ಮೀಸಲಿಡಲಾಗಿದೆ.
ಕರಡು ಮೀಸಲಾತಿ ಪಟ್ಟಿಗೆ ಸಂಬ0ಧಿಸಿದ0ತೆ ಆಕ್ಷೇಪಣೆಗಳಿದ್ದಲ್ಲಿ, ಸೂಕ್ತ ಪೂರಕ ದಾಖಲೆಗಳೊಂದಿಗೆ ಅಕ್ಟೋಬರ್ 19ರಂದು ಸಂಜೆ 5 ಗಂಟೆಯೊಳಗೆ ಅಂಚೆ ಅಥವಾ ನೇರವಾಗಿ ಪಂಚಾಯತ್ ರಾಜ್ ಇಲಾಖೆಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರು ನಿಗದಿತ ಅವಧಿಯೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಅಧಿಸೂಚನೆಯಲ್ಲಿ ಸೂಚಿಸಲಾಗಿದೆ.
