ಕಳಸ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪ್ರವೇಶಕ್ಕೆ ಅರ್ಜಿಸಲ್ಲಿಕೆ ಆರಂಭವಾಗಿದ್ದು, ವಿದ್ಯಾರ್ಥಿಗಳು ಬಿಎ ಮತ್ತು ಬಿ.ಕಾಂ ಪದವಿಗಳಿಗೆ ಪ್ರವೇಶಾತಿ ಪಡೆಯಬಹುದು. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ವಯ ಬಿಎ ಪದವಿಯಲ್ಲಿ ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಐಚ್ಛಿಕ ಕನ್ನಡ ಮತ್ತು ಪತ್ರಿಕೋದ್ಯಮ ವಿಷಯಗಳು ಹಾಗೂ ಬಿ.ಕಾಂ ಪದವಿಯಲ್ಲಿ ವಿಶ್ವವಿದ್ಯಾನಿಲಯ ನಿಗದಿಪಡಿಸಿದ ಕಡ್ಡಾಯ ವಿಷಯಗಳು ವ್ಯಾಸಂಗಕ್ಕೆ ಲಭ್ಯವಿರುತ್ತದೆ.
ಅರ್ಹ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಇಲಾಖೆಯ ಪ್ರವೇಶಾತಿ ಪೋರ್ಟಲ್ https://uucms.karnataka.gov.inಮೂಲಕ ಆನ್ಲೈನ್ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ದೂರವಾಣಿ ಸಂಖ್ಯೆ: 08263-295233 ಗೆ ಸಂಪರ್ಕಿಸಬಹುದು ಎಂದು ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
