ಕಳಸ ಪಟ್ಟಣದ ಮಹಾವೀರ ರಸ್ತೆಯಲ್ಲಿ ಕ್ಷೌರಿಕ ವೃತ್ತಿ ಮಾಡುತ್ತಿದ್ದ ಸುಧೀರ್ ಭಂಡಾರಿ (38) ಬುಧವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಟ್ಟಣದ ಗೋರಿಮಕ್ಕಿ ಪ್ರದೇಶದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅವರು ಮಧ್ಯಾಹ್ನದ ವೇಳೆಗೆ ಪ್ಯಾನ್ ಗೆ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ.
ಜೀವನದಲ್ಲಿ ಜಿಗುಪ್ಸೆಗೊಂಡು ಸುಧೀರ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.ಮೃತರಿಗೆ ಪತ್ನಿ ಗಂಡು ಮಗು ಇದೆ.
ಪ್ರಕರಣ ಕಳಸ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
