ಕಳಸ ತಾಲ್ಲೂಕಿನ ಎಸ್.ಕೆ.ಮೇಗಲ್ ಗ್ರಾಮದಲ್ಲಿ ಕಾಡುಕೋಣವೊಂದು ಧರೆಯಿಂದ ಬಿದ್ದು ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಸ್ಥಳಿಯರ ಮಾಹಿತಿ ಪ್ರಕಾರ ಬೃಹತ್ ಗಾತ್ರದ ಕಾಡುಕೋಣ ಎತ್ತರದ ಧರೆಯಿಂದ ಆಯತಪ್ಪಿ ರಸ್ತೆಗೆ ಬಿದ್ದಿದೆ.ಪರಿಣಾಮವಾಗಿ ಕಾಡುಕೋಣ ಸ್ಥಳದಲ್ಲಿಯೇ ಮೃತಪಟ್ಟಿದೆ ಎಂದು ತಿಳಿಸಿದ್ದಾರೆ.
ಅರಣ್ಯ ಇಲಾಖಾ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
