ಇಡಕಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಳಂದೂರಿನ ರಮೇಶ ಹೆಚ್.ಪಿ. ಇವರು ಮನೆಯಿಂದ ರಾತ್ರಿ ಹೊತ್ತಲ್ಲಿ ಹೊರಗೆ ಹೋದವರು ನಾಪತ್ತೆಯಾಗಿದ್ದರೆ ಎಂದು ಅವರ ಪತ್ನಿ ಶಿಲ್ಪ ಕಳಸ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ರಾತ್ರಿ ಒಂದು ಗಂಟೆಯ ಸುಮಾರಿಗೆ ಮೂತ್ರ ವಿಸರ್ಜನೆಗೆಂದು ಹೊರಗೆ ಹೋದವರು ಕಾಣೆಯಾಗಿದ್ದಾರೆ.ಎಲ್ಲಾ ಕಡೆ ಹುಡುಕಾಡಿದರೂ ಪತ್ತೆಯಾಗಿಲ್ಲ ಎಂದು ಆಗಸ್ಟ್ 16ರಂದು ಕಳಸ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕಾಣೆಯಾದವರು ಎಲ್ಲಾದರೂ ಕಂಡು ಬಂದಲ್ಲಿ ಕಳಸ ಪೊಲೀಸ್ ಠಾಣೆಗೆ ಮಾಹಿತಿ ನೀಡಿ.
