ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಪಂಚಾಯಿತಿ ಚಿಕ್ಕಮಗಳೂರು, ತಾಲ್ಲೂಕು ಪಂಚಾಯಿತಿ ಮೂಡಿಗೆರೆ, ಕಳಸ ಸಂಜೀವಿನಿ ಗ್ರಾಮ ಪಂಚಾಯಿತಿ ಒಕ್ಕೂಟ ಮತ್ತು ಗ್ರಾಮ ಪಂಚಾಯಿತಿ ಕಳಸ ವತಿಯಿಂದ ಸೆಷ್ಟಂಬರ್ 18ರ ರವಿವಾರ ಸಂಜೀವಿನಿ ಮಾಸಿಕ ಸಂತೆ, ಪ್ರದರ್ಶನ ಮತ್ತು ಮಾರಾಟ ವನ್ನು ಹಮ್ಮಿಕೊಳ್ಳಲಾಗಿದೆ.
ಕಳಸ ಪಟ್ಟಣದ ದುರ್ಗಾ ಮಂಟಪದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಪ್ರಾರಂಭಗೊಳ್ಳಲಿದೆ.ಸಂತೆಯಲ್ಲಿ ಮಹಿಳೆಯರು ಸ್ಥಳೀಯವಾಗಿ ಉತ್ಪಾದಿಸುವ ಉತ್ಪನ್ನಗಳನ್ನು ಮಾರಾಟಕ್ಕೆ ಇಡಲಾಗುತ್ತದೆ.
