ಕಳಸ ಲೈವ್ ವರದಿ
ದಿನಾಂಕ:30.09.2022 ರಂದು ಶುಕ್ರವಾರ ನವರಾತ್ರಿ ಲಲಿತಾ ಪಂಚಮಿಯಂದು ಕಳಸ ಕಲಶೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಕುಂಕುಮಾರ್ಚನೆ ನಡೆಯಲಿದೆ.
ಪ್ರತಿ ವರ್ಷದ ಆಶ್ವಯುಜ ಮಾಸದ ಮೊದಲ ದಿನ ಅಂದರೆ ಪಾಡ್ಯದಿಂದ ನವಮಿಯವರೆಗೆ (ನವರಾತ್ರಿ) ಶಕ್ತಿ ಸ್ವರೂಪಿಣಿಯವರಾದ ಜಗನ್ಮಾತೆಯರನ್ನು ಹಿಂದಿನಿಂದಲೂ ವಿಶೇಷವಾಗಿ ಆರಾಧಿಸುವುದು/ಪೂಜಿಸುವುದು ಹಿಂದೂ ಧರ್ಮದಲ್ಲಿ ನಡೆಸಿಕೊಂಡು ಬರುತ್ತಿರುವ ಆಚರಣೆಯಾಗಿರುತ್ತದೆ. ಅದರಂತೆ ದಿನಾಂಕ:30.09.2022 ರ ಶುಕ್ರವಾರವು ಲಲಿತಾ ಪಂಚಮಿ ವಿಶೇಷ ದಿನವಾಗಿರುತ್ತದೆ.
ಧಾರ್ಮಿಕ ದತ್ತಿ ಇಲಾಖೆಯ ಆದೇಶ ದಂತೆ ಲೋಕ ಕಲ್ಯಾಣಕ್ಕಾಗಿ ಕಲಶೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಕುಂಕುಮಾರ್ಚನೆಯನ್ನು ಮಾಡಲಾಗುತ್ತದೆ.
ಈ ಕಾರ್ಯಕ್ರಮಕ್ಕೆಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಬಂದು ಕಾರ್ಯಕ್ರಮ ಯಶಸ್ವಿಯಾಗಿ ನಡೆಸಿಕೊಡಬೇಕು ಎಂದು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರೇಮಲತಾ ತಿಳಿಸಿದ್ದಾರೆ
