DCIM101MEDIADJI_0361.JPG
ಕಳಸ ಲೈವ್ ವರದಿ
ಹೊರನಾಡು ಅನ್ನಪೂರ್ಣೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಶುಕ್ರವಾರ ಲೋಕಕಲ್ಯಾಣಾರ್ಥವಾಗಿ ಶ್ರೀಮನ್ ಮಹಾಚಂಡಿಕಾ ಹೋಮ ನಡೆಯಿತು.
ಬೆಳಿಗ್ಗೆ 6.30ಕ್ಕೆ ಆರಂಭಗೊಂಡ ಧಾರ್ಮಿಕ ವಿಧಿ ವಿಧಾನಗಳಲ್ಲಿ ಸಪ್ತಶತಿ ಪಾರಾಯಣ,ವೇದ ಪಾರಾಯಣ,ಸುಂದರಕಾಂಡ ಪಾರಾಯಣ,ಕುಂಕುಮಾರ್ಚನೆ ಮತ್ತು ಪರಿವಾರ ದೇವರುಗಳಿಗೆ ವಿಶೇಷ ಪೂಜಾ ವಿಧಿ ವಿಧಾನಗಳು ನಡೆಯಿತು. ಬೆಳಿಗ್ಗೆ ಧರ್ಮಕರ್ತರಿಂದ ಶ್ರೀ ಮಾತೆಗೆ ಮಹಾಅಭಿಷೇಕ ಅಲ್ಲದೆ ಇದೇ ಸಂದರ್ಭದಲ್ಲಿ ಶ್ರೀಮನ್ ಮಹಾಚಂಡಿಕಾ ಹೋಮ ನಡೆಯಿತು. ಮದ್ಯಾಹ್ನ 12.30ಕ್ಕೆ ಚಂಡಿಕಾ ಹೋಮದ ಪೂರ್ಣಾಹುತಿಯನ್ನು ಜಿ.ಭೀಮೇಶ್ವರ ಜೋಷಿ ಹಾಗೂ ದಂಪತಿಗಳು ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಸ್ಥಳಿಯರು ಸೇರಿದಂತೆ ರಾಜ್ಯ ಹೊರರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
ಇದರೊಂದಿಗೆ ಕಳೆದ ಹನ್ನೆರಡು ದಿನಗಳಿಂದ ನಡೆಯುತ್ತಿದ್ದ ಶರನ್ನವರಾತ್ರಿ ಮಹೋತ್ಸವಕ್ಕೆ ತೆರೆ ಬಿದ್ದಿದೆ.
