
ಕಳಸ ಲೈವ್ ವರದಿ
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾಗುವ ಚಿತ್ರಕಲಾ ಸ್ಪರ್ಧೆಯಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿನಿ ಝಕೀಯ ಇವರು
ದಿನಾಂಕ 17.11.2022ರಂದು ಮೈಸೂರಿನಲ್ಲಿ ನಡೆದ ವಿಭಾಗ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ದಿನಾಂಕ: 15.11.2022 ರಂದು ಮೂಡಿಗೆರೆಯಲ್ಲಿ ನಡೆದ ತಾಲೂಕು ಹಂತದ ಕ್ರೀಡಾಕೂಟದಲ್ಲಿ ಸಮರ್ಥ ಈ ವಿದ್ಯಾರ್ಥಿಯು ತ್ರಿವಿಧ ಜೀವಿತದಲ್ಲಿ ಪ್ರಥಮ ಸ್ಥಾನ ಹಾಗೂ ಎತ್ತರ ಜಿಗಿತದಲ್ಲಿ ಎರಡನೇ ಸ್ಥಾನವನ್ನು ಪಡೆಯುವುದರ ಮೂಲಕ ಜಿಲ್ಲಾ ಹಂತಕ್ಕೆ ಆಯ್ಕೆಯಾಗಿರುತ್ತಾರೆ.
ಈ ಇಬ್ಬರು ವಿದ್ಯಾರ್ಥಿಗಳಿಗೆ ಎಸ್ ಡಿ ಎಂ ಸಿ ಅಧ್ಯಕ್ಷರು ಮತ್ತು ಸದಸ್ಯರು, ಶಿಕ್ಷಕ ವೃಂದ, ಪೆÇೀಷಕರು ಮತ್ತು ಹಿರಿಯ ವಿದ್ಯಾರ್ಥಿಗಳು ಕೃತಜ್ಞತೆ ಸಲ್ಲಿಸಿರುತ್ತಾರೆ..