ಕಳಸ ಲೈವ್ ವರದಿ
ಮೂಡಿಗೆರೆ ತಾಲೂಕಿನ ಸಬ್ಬೇನಹಳ್ಳಿ ಬಳಿ ಬೈಕು ಮತ್ತು ಕ್ಯಾಂಟರ್ ಡಿಕ್ಕಿಯಿಂದ ಹೊರಟ್ಟಿ ಗ್ರಾಮದ ಧನ್ಯಕುಮಾರ್ ಮೆದುಳು ಸಂಪೂರ್ಣ ನಿಷ್ಕ್ರಿಯವಾಗಿತ್ತು.
ಎಷ್ಟೇ ಪ್ರಯತ್ನಪಟ್ಟರೂ ಬದುಕಿಸಲು ಸಾಧ್ಯವಿಲ್ಲ ಎಂದು ತಿಳಿಸಿದ ವೈದ್ಯರು ಧನ್ಯಕುಮಾರ್ ದೇಹದ ಇತರೆ ಭಾಗಗಳು ಸುರಕ್ಷಿತವಾಗಿವೆ ಎಂದಿದ್ದರು.
ವೈದ್ಯರ ಸಲಹೆ ಮೇರೆಗೆ ಅಂಗಾಂಗ ದಾನಕ್ಕೆ ಕುಟುಂಬಸ್ಥರು ಮುಂದಾಗಿದ್ದು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಪ್ರಕ್ರಿಯೆ ನಡೆದಿದೆ.
ಹೃದಯ, ಕಿಡ್ನಿ, ಲಿವರ್, ಕಣ್ಣು ಸೇರಿದಂತೆ ದೇಹದ ಪ್ರಮುಖ ಭಾಗಗಳ ಅಂಗಾಂಗ ದಾನ ಮಾಡಲು ನಿರ್ಧರಿಸಲಾಗಿದೆ.
4 ವರ್ಷದ ಮಗಳು, ಪತ್ನಿ, ತಂದೆ-ತಾಯಿಯನ್ನ ಧನ್ಯಕುಮಾರ್ ಅಗಲಿದ್ದಾರೆ.