- ಕಳಸ ಲೈವ್ ವರದಿ
ಕಳಸ ತಾಲ್ಲೂಕಿನ ಶೌರ್ಯ ಸಮಿತಿಗೆ ಮಾಸ್ಟರ್ ಆಗಿ ಮಹೇಶ್ ಬಿ.ಕೆ ಮತ್ತು ಕ್ಯಾಪ್ಟನ್ ಆಗಿ ಅಜಿತ್ ಕುಳಾಲ್ ಇವರನ್ನು ಗುರುವಾರ ನಡೆದ
ಮೂಡಿಗೆರೆ ಹಾಗೂ ಕಳಸ ತಾಲ್ಲೂಕಿನ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಯ ಮಾಸಿಕ ಸಭೆಯಲ್ಲಿ ಆಯ್ಕೆ ಮಾಡಲಾಯಿತು.
ಮಾಸಿಕ ಸಭೆಯನ್ನು ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿ.ಪಾಯ್ಸ್ ರವರು ಉದ್ಘಾಟನೆ ಮಾಡಿ ಮಾತನಾಡಿದ ಅವರು ಮೂಡಿಗೆರೆ ತಾಲ್ಲೂಕಿನಲ್ಲಿ ಕಳೆದ ಎರಡು ವರ್ಷದ ಹಿಂದೆ ಆರಂಭಿಸಲಾದ ಶೌರ್ಯ ವಿಪತ್ತು ನಿರ್ವಹಣಾ ತಂಡ ಇಂದು ಅನೇಕ ವಿಪತ್ತು ನಿರ್ವಹಣಾ ಚಟುವಟಿಕೆಗಳನ್ನು, ಸಾಮಾಜಿಕ ಕಳಕಳಿಯ ಚಟುವಟಿಕೆಗಳನ್ನು ನಿರ್ವಹಿಸಿ ರಾಜ್ಯದಲ್ಲಿಯೇ ಮುಂಚೂಣಿ ಸ್ಥಾನದಲ್ಲಿ ಗುರುತಿಸಿಕೊಂಡಿದೆ ಎಂದರು.
ಪ್ರಸ್ತುತ ರಾಜ್ಯದ 11 ಜಿಲ್ಲೆಗಳ 66 ತಾಲ್ಲೂಕುಗಳಲ್ಲಿ ಧರ್ಮಸ್ಥಳದ ವಿಪತ್ತು ನಿರ್ವಹಣಾ ತಂಡ ಇದೆ. 9120 ಸ್ವಯಂಸೇವಕರು ಸೇರ್ಪಡೆಗೊಂಡಿದ್ದಾರೆ.
ಮಳೆಗಾಲದಲ್ಲಿ ವಿಪತ್ತು ನಿರ್ವಹಣಾ ಚಟುವಟಿಕೆಗಳಲ್ಲಿ ಸ್ವಯಂಸೇವಕರು ಸಕ್ರಿಯವಾಗಿ ತೊಡಗಿಸಿಕೊಂಡು ಉಳಿದ ದಿನಗಳಲ್ಲಿ ಸಾಮಾಜಿಕ ಸೇವಾಚಟುವಟಿಕೆಗಳಲ್ಲಿ ತೊಡಗಿಕೊಂಡು ತಮ್ಮ ಗ್ರಾಮದ ವ್ಯಾಪ್ತಿಯಲ್ಲಿ ಆಪತ್ ಕಾಲದ ಬಾಂಧವರಾಗಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.
ಇದುವರೆಗೆ 53,800 ಸ್ವಯಂ ಸೇವಕರು ಸೇವಾ ಚಟುವಟಿಕೆಗಳನ್ನು ಮಾಡಿದ್ದಾರೆ. ಸಾರ್ವಜನಿಕರಿಗೆ ವಿಪತ್ತು ನಿರ್ವಹಣೆಯ ಬಗ್ಗೆ 6380ⁿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.
ಸ್ವಯಂಸೇವಕರಿಗೆ ಶೌರ್ಯ ಘಟಕಗಳ ಬಲವರ್ಧನೆ, ಗುಣಮಟ್ಟದ ಸೇವಾಕಾರ್ಯಗಳ ಆಯೋಜನೆ, ವಿಪತ್ತು ನಿರ್ವಹಣಾ ಚಟುವಟಿಕೆಗಳಲ್ಲಿ ವಹಿಸಬೇಕಾದ ಎಚ್ಚರಿಕೆಗಳ ಬಗ್ಗೆ ಮಾಹಿತಿ ನೀಡಿದರು.
ವಿಪತ್ತು ನಿರ್ವಹಣಾ ಸಮಿತಿಯು ಸ್ವತಂತ್ರವಾಗಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ನಿಟ್ಟಿನಲ್ಲಿ
ಕಳಸ ತಾಲ್ಲೂಕಿಗೆ ಮಾಸ್ಟರ್ ನ್ನಾಗಿ ಮಹೇಶ್ ಬಿ.ಕೆ ಹಾಗೂ ಕ್ಯಾಪ್ಟನ್ ಆಗಿ ಅಜಿತ್ ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಇವರು ಸರ್ಕಾರದ ವಿವಿಧ ಇಲಾಖೆಗಳೊಂದಿಗೆ ಸಂಪರ್ಕದಲ್ಲಿ ಇದ್ದು ವಿಪತ್ತು ನಿರ್ವಹಣಾ ಚಟುವಟಿಕೆಗಳನ್ನು ನಡೆಸಲಿದ್ದಾರೆ ಎಂದರು.
ಮೂಡಿಗೆರೆ ತಾಲೂಕಿನ ಯೋಜನಾಧಿಕಾರಿ ಶಿವಾನಂದ್, ವಿಪತ್ತು ನಿರ್ವಹಣಾ ಯೋಜನಾಧಿಕಾರಿ ಜೈವಂತ ಪಟಗಾರ್, ವಲಯದ ಮೇಲ್ವಿಚಾರಕರು, ಎಲ್ಲಾ ಘಟಕಗಳ ಸಂಯೋಜಕರು, ಘಟಕ ಪ್ರತಿನಿಧಿಗಳು, ಘಟಕ ಸೇವಾಪ್ರತಿನಿಧಿಗಳು, 83 ಸ್ವಯಂಸೇವಕರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸ್ವಯಂಸೇವಕರಿಗೆ ಶೌರ್ಯ ಕ್ಯಾಪ್ ವಿತರಣೆ ಮಾಡಲಾಯಿತು.