ಕಳಸ ಲೈವ್ ವರದಿ
ಕಳಸದಲ್ಲಿ ಪೆ 27 ಮತ್ತು 28ರಂದು ನಡೆಯುವ 18ನೇ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವಂತೆ ಕನ್ನಡ ಮತ್ತು ಸಂಸ್ಕ್ರತಿ ಸಚಿವ ಸುನೀಲ್ ಕುಮಾರ್ ಇವರನ್ನು ಸಮ್ಮೇಳನದ ಸ್ವಾಗತ ಸಮಿತಿ ಅಧಿಕೃತವಾಗಿ ಆಹ್ವಾನಿಸಿತು.
ಭಾನುವಾರ ಬೆಳಿಗ್ಗೆ ಜಿಲ್ಲಾ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಕೆ.ಕೆ.ಬಾಲಕೃಷ್ಣ ಭಟ್, ಕಾರ್ಯಾಧ್ಯಕ್ಷ ಎಂ.ಎ. ಶೇಷಗಿರಿ, ಉಪಾದ್ಯಕ್ಷ ನಾಗಭೂಷಣ್, ಕಳಸ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಅ.ರಾ.ಸತೀಶ್ಚಂದ್ರ, ಹರ್ಷ ಇವರು ಸಚಿವರ ನಿವಾಸಕ್ಕೆ ತೆರಳಿ ಆಹ್ವಾನಿಸಿದರು.
