ಕಳಸ ಲೈವ್ ವರದಿ
ಇಲ್ಲಿಯ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಇದೇ ಶುಕ್ರವಾರ ಶ್ರೀ ವರಮಹಾಲಕ್ಷ್ಮೀ ವ್ರತ, ಲಕ್ಷದೂರ್ವಾರ್ಚನೆ ಮತ್ತು ಕೋಟಿ ಕುಂಕುಮಾರ್ಚನೆ ಕಾರ್ಯಕ್ರಮ ನಡೆಯಲಿದೆ.
ಅಂದು ಬೆಳಿಗ್ಗೆ 10 ಗಂಟೆಗೆ ಸರಿಯಾಗಿ ಶ್ರೀ ವರಮಹಾಲಕ್ಷ್ಮೀ ವ್ರತ ಆಚರಣೆ , ಲಕ್ಷದೂರ್ವಾರ್ಚನೆ, ಕೋಟಿ ಕುಂಕುಮಾರ್ಚನೆ ಪ್ರಾರಂಭವಾಗುತ್ತದೆ.
ಸಂಜೆ 3 ಗಂಟೆಯಿಂದ ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಪ್ರಸಿದ್ದ ಕಲಾವಿದರ ಭಾಗವಹಿಸುವಿಕೆಯಲ್ಲಿ ಕರ್ಣಾರ್ಜುನ ಎಂಬ ಯಕ್ಷಗಾನ ತಾಳ ಮದ್ದಳೆ ನಡೆಯಲಿದೆ ಎಂದು ದೇವಸ್ಥಾನದ ಧರ್ಮಕರ್ತರಾದ ಜಿ.ಭೀಮೇಶ್ವರ ಜೋಷಿ ತಿಳಿಸಿದ್ದಾರೆ.


