
ಕಳಸ ಲೈವ್ ವರದಿ
ಹೊರನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 25 ವರ್ಷಗಳ ಕಾಲ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ ಬೇರೆ ಶಾಲೆಗೆ ವರ್ಗವಣೆಗೊಂಡ ಕುಮಾರಾಚಾರ್ ಇವರನ್ನು ಬೀಳ್ಕೊಡಲಾಯಿತು.
ಹಾಗೂ ಸುಮಾರು 21 ವರ್ಷಗಳ ಕಾಲ ಇಲ್ಲಿಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಹೆಚ್.ಎಸ್ ಪದ್ಮನಾಭ ಭಟ್ ಇವರಿಗೆ ಹಳೆ ವಿದ್ಯಾರ್ಥಿಗಳ ವತಿಯಿಂದ ಸನ್ಮಾನ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಮತ್ತು ಪ್ರಾಥಮಿಕ ಪ್ರೌಡಶಾಲೆ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.


