
ಕಳಸ ಲೈವ್ ವರದಿ
ಕಳಸ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸೈ ಜಿ.ಕೆ.ಮುರುಳಿಧರ್ ಇಂದು ಬೆಳಗ್ಗಿನ ಜಾವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಭಾನುವಾರ ಬೆಳಗ್ಗಿನ ಜಾವ ಮುರುಳಿ ಅವರಿಗೆ ಹೃದಯ ನೋವು ಕಾಣಿಸಿಕೊಂಡ ತಕ್ಷಣ ಕಳಸ ಖಾಸಾಗಿ ಆಸ್ಪತ್ರೆಗೆ ಕರೆದುಕೊಂಡಿ ಬರಲಾಗಿತ್ತು.ಆದರೆ ಕೆಲವೇ ಹೊತ್ತಿನಲ್ಲಿ ಅವರು ಅಸು ನೀಗಿದ್ದಾರೆ.
ಮೂಲತಃ ಬೀರೂರುನವರಾಗಿದ್ದ ಇವರು ಕಳೆದ ನಾಲ್ಕು ವರ್ಷಗಳಿಂದ ಕಳಸ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಇವರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
