ಕಳಸ ಲೈವ್ ವರದಿ
ಕಳಸ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶುಕ್ರವಾರ ಆಯುಷ್ಮಾನ್ ಭವ ಯೋಜನೆಯಡಿಯಲ್ಲಿ ಉಚಿತ ಆರೋಗ್ಯ ಮೇಳ ನಡೆಯಿತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ತಾಲ್ಲೂಕು ವೈದ್ಯಾಧಿಕಾರಿಗಳು ಮೂಡಿಗೆರೆ ಮತ್ತು ಕಳಸ ಸಮುದಾಯ ಕೇಂದ್ರ ಸಂಯುಕ್ತಾಶ್ರಯದಲ್ಲಿ ನಡೆದ ಆರೋಗ್ಯ ಮೇಳದಲ್ಲಿ ನೂರಾರು ಜನ ಇದರ ಸದುಪಯೋಗವನ್ನು ಪಡೆದುಕೊಂಡರು.
ಈ ಮೇಳದಲ್ಲಿ ಮಕ್ಕಳ ತಜ್ಞರು, ಪ್ರಸೂತಿ ತಜ್ಞರು, ಕಿವಿ, ಮೂಗು, ಗಂಟಲು, ಹಾಗೂ ಫಿಜೀಷಿಯನ್ ತಜ್ಞ ವೈದ್ಯರುಗಳು ಆಗಮಿಸಿ ಉಚಿತವಾದ ತಪಾಸಣೆ ಮಾಡಿ ಸೂಕ್ತ ಪರಿಹಾರವನ್ನು ನೀಡಿದರು.
ಅಂಗಾಂಗ ದಾನ ಮತ್ತು ಆಬಾ ಕಾರ್ಡ್ಗಳನ್ನು ಕಳಸ ಸಮುದಾಯ ಕೇಂದ್ರದಲ್ಲಿ ಮಾಡಿಕೊಳ್ಳಬಹುದು ಎಂದು ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ| ಮಧುಸೂದನ್ ತಿಳಿಸಿದ್ದಾರೆ.