
ಕಳಸ ಲೈವ್ ವರದಿ
ಕುದುರೆಮುಖ-ಕಾರ್ಕಳ ರಾಜ್ಯ ಹೆದ್ದಾರಿಯಲ್ಲಿ ಶನಿವಾರ ಬೆಳಿಗ್ಗೆ ಮರವೊಂದು ರಸ್ತೆಗೆ ಬಿದ್ದ ಪರಿಣಾಮ ಕೆಲ ಕಾಲ ರಸ್ತೆ ಸಂಪರ್ಕ ಕಡಿತಗೊಂಡಿತ್ತು. ಪ್ರಯಾಣಿಕರು ಒಂದೆರಡು ಗಂಟೆಗಳ ಕಾಲ ರಸ್ತೆಯಲ್ಲಿ ಇದ್ದು, ತೊಂದರೆ ಪಡುವಂತಾಯಿತು.
ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಬೇಟಿ ನೀಡಿ ಮರ ತೆರವು ಮಾಡಿ ಪ್ರಯಾಣಿಕರ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
