ಕಳಸ ಲೈವ್ ವರದಿ
ಕಳಸ ತಾಲ್ಲೂಕಿನಾಧ್ಯಂತ ಮಳೆ ಮುಂದುವರೆದಿದ್ದು, ಮಳೆಯಿಂದಾಗಿ ತಾಲ್ಲೂಕಿನ ಕೋಟೆಮಕ್ಕಿಯಲ್ಲಿ ಮನೆಯ ಛಾವಣಿ ಕುಸಿದಿದೆ.
ಇಡಕಣಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಟೆಮಕ್ಕಿ, ಶ್ರೀಮತಿ ಶೇಷಮ್ಮ ಇವರ ವಾಸದ ಮನೆಯ ಛಾವಣಿ ಕುಸಿದಿದೆ.
ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಕಳಸ ತಾಲ್ಲೂಕು ತಹಶೀಲ್ದಾರ್ ಮಂಜುನಾಥ್, ರೆವಿನ್ಯೂ ಇನ್ಸ್ ಪೆಕ್ಟರ್ ಅಜ್ಜೇಗೌಡ, ಗ್ರಾಮ ಲೆಕ್ಕಾಧಿಕಾರಿ ಪ್ರದೀಪ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.