ಕಳಸ ಲೈವ್ ವರದಿ
ತಾಲ್ಲೂಕಿನ ಇಡಕಣಿ ಗ್ರಾಮ ಪಂಚಾಯತಿ 2022-23ನೇ ಸಾಲಿನ “ಗಾಂಧಿ ಗ್ರಾಮ ಪುರಸ್ಕಾರ”ರವನ್ನು ಸೋಮವಾರ ನೀಡಲಾಯಿತು.
ಇಡಕಣಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಾಸುದೇವ ಉಡುಪ, ಪಂಚಾಯಿತಿ ಅಧ್ಯಕ್ಷ ರವೀಂದ್ರ ಎನ್.ಆರ್ ಪುರಸ್ಕಾರವನ್ನು ಪಡೆದುಕೊಂಡರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹಮದ್ ಸೇರಿ ಹಲವು ಮುಖಂಡರು ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.



