ಕಳಸ ಲೈವ್ ವರದಿ
ಶ್ರೀ ಕ್ಷೇತ್ರ ಹೊರನಾಡಿನ ಜಗನ್ಮಾತೆ ಅನ್ನಪೂರ್ಣೇಶ್ವರಿಯ ಸನ್ನಿಧಿಯಲ್ಲಿ ಭಾನುವಾರ ಶರನ್ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

ಭಾನುವಾರ ಶ್ರೀ ಮಾತೆಗೆ ವಿಶೇಷ ಅಲಂಕಾರಗಳೊಂದಿಗೆ ಜಗಜ್ಜನನೀ ದುರ್ಗಾದೇವಿಯ ಮೊದಲನೆ ಸ್ವರೂಪ ಹಂಸರೂಢ ಸರಸ್ವತಿಯ ರೂಪದಲ್ಲಿ ಮಾತೆ ಅನ್ನಪೂರ್ಣೆಶ್ವರಿ ಕಂಗೊಳಿಸಿದಳು.
ಬೆಳಿಗ್ಗೆ ಘಂಟೆ 6.30ರ ಸಮಯಕ್ಕೆ ಸರಿಯಾಗಿ ನವರಾತ್ರಿಯ ಪೂಜಾ ವಿಧಿ ವಿಧಾನಗಳು ಪ್ರಾರಂಭಗೊಂಡವು. ಸಪ್ತಶತಿ ಪಾರಾಯಣ,ವೇದ ಪಾರಾಯಣ,ಸುಂದರಕಾಂಡ ಪಾರಾಯಣ,ಕುಂಕುಮಾರ್ಚನೆ ಪೂಜೆಗಳು ನೆರವೇರಿದವು. ಬೆಳಿಗ್ಗೆ 8.30ಕ್ಕೆ ಶ್ರೀ ಪಂಚದುರ್ಗಾ ಹೋಮ ನಡೆಯಿತು.ಹೋಮದ ಪೂರ್ಣಾಹುತಿಯನ್ನು ದೇವಸ್ಥಾನದ ದರ್ಮಕರ್ತರಾದ ಡಾ|ಜಿ.ಭೀಮೇಶ್ವರ ಜೋಷಿ ದಂಪತಿಗಳು ನೆರವೇರಿಸಿದರು.

ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ರಾಜ್ಯ ಹೊರ ರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು. ಭಕ್ತರು ಸರತಿ ಸಾಲಿನಲ್ಲಿ ನಿಂತು ಮಾತೆ ಅನ್ನಪೂರ್ಣೇಶ್ವರಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.
ಸಾಂಸ್ಕøತಿಕ ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಕು|| ಸಹನಾ ಸಂದೀಪ್ ಮತ್ತು ತಂಡ ಬೆಂಗಳೂರು ಇವರಿಂದ ಗಾಯನ ಮತ್ತು ವೀಣಾ ವಾದನ. ಸಂಜೆ ನಂದಿ ಭರತನಾಟ್ಯ ಕಲಾ ಶಾಲಾ ಬೆಂಗಳೂರು ಇವರಿಂದ ಭರತ ನಾಟ್ಯ ಕಾರ್ಯಕ್ರಮ ನಡೆಯಿತು.



