ಕಳಸ ಲೈವ್ ವರದಿ
ಕಳಸ ತಾಲೂಕಿನ ಕಳಸ ಪೇಟೆಯ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯವರಾದ ರಾಜರ್ಷಿ ಡಾ|| ಶ್ರೀ ಡಿ ವೀರೇಂದ್ರ ಹೆಗ್ಗಡೆಯವರು 10 ಲಕ್ಷ ರೂಪಾಯಿ ದೇಣಿಗೆಯ ಡಿಡಿಯನ್ನು ಚಂದ್ರನಾಥ ಸ್ವಾಮಿ ಬಸದಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು.