ಕಳಸ ಲೈವ್ ವರದಿ
ಕಳಸ ತಾಲ್ಲೂಕಿನ ವಿವಿದೆಡೆ ರಸ್ತೆ ಕಾಮಗಾರಿಗಳಿಗೆ ತಾಲ್ಲೂಕಿನ ಶಾಸಕರಾದ ನಯನಾ ಮೋಟಮ್ಮ ಗುರುವಾರ ಗುದ್ದಲಿ ಪೂಜೆ ಮಾಡಿದ್ದಾರೆ. ಇದರಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಆಹ್ವಾನ ನೀಡದೆ ಕಡೆಗಣಿಸಲಾಗಿದೆ ಎಂದು ಕಳಸ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಂಗನಾಥ್ ಆರೋಪಿಸಿದ್ದಾರೆ.
ಕಳಸ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚಿನಕೆರೆ, ಎಡದಾಳು, ಮಹಾವೀರ ರಸ್ತೆಯ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಲಾಗಿದೆ.ಆದರೆ ಅಲ್ಲಿಯ ಸ್ಥಳಿಯ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗಮನಕ್ಕೂ ತರದೆ ಗುದ್ದಲಿ ಪೂಜೆ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಅಧ್ಯಕ್ಷೆ ಉಷಾ ವಿಶ್ವನಾಥ್ ಪತ್ರ ಬರೆದು ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಗ್ರಾಮ ಪಂಚಾಯಿತಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಯಾಯ ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರಿಗೆ ಮಾಹಿತಿಯನ್ನು ನೀಡಬೇಕು.ಆದರೆ ಇಲ್ಲಿ ಯಾವುದೇ ಮಾಹಿತಿಯನ್ನು ನೀಡದೆ ಕಾರ್ಯಕ್ರಮ ಮಾಡಿರುವುದು ಶಾಸಕಿ ನಯನಾ ಮೋಟಮ್ಮನವರಿಗೆ ಶೋಭೆ ತರುವುದಿಲ್ಲ ಎಂದು ಗ್ರಾ.ಪಂ ಉಪಾಧ್ಯಕ್ಷ ರಂಗನಾಥ್ ತಿಳಿಸಿದ್ದಾರೆ.


