
ಕಳಸ ಲೈವ್ ವರದಿ
ಕಳಸದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ಬಿ.ಎ ವ್ಯಾಸಂಗ ಮಾಡುತ್ತಿರುವ ಕು. ಪ್ರಗತಿ ಡಿ.ಡಿ ರವರು ತಿರುಪತಿಯ ಪದ್ಮಾವತಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಅಂತರ್ ವಿಶ್ವವಿದ್ಯಾಲಯ ಮಹಿಳಾ ವಾಲಿಬಾಲ್ ಪಂದ್ಯಾವಳಿಯಲ್ಲಿ ಕುವೆಂಪು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸುತ್ತಿದ್ದಾರೆ.
ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಶಾಂತ್ ರವರ ಮಾರ್ಗದರ್ಶನದಲ್ಲಿ ತಯಾರಿ ನಡೆಸುತ್ತಿರುವ ವಿದ್ಯಾರ್ಥಿನಿಯು ಇತ್ತೀಚೆಗೆ ನಡೆದ ವಿಶ್ವವಿದ್ಯಾಲಯದ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಈ ಸಾಧನೆಗೆ ಪಾತ್ರರಾಗಿದ್ದಾರೆ.
ಇವರ ಈ ಸಾಧನೆಗೆ ಪ್ರಾಂಶುಪಾಲ ವಿನಯ ಕುಮಾರ್ ಶೆಟ್ಟಿ ಮತ್ತು ಬೋದಕ ಮತ್ತು ಬೋಧಕೇತರ ವರ್ಗ ಅಭಿನಂದನೆ ಸಲ್ಲಿದ್ದಾರೆ.



