

ಕಳಸ ಲೈವ್ ವರದಿ
ಕಳಸ ರಾಜಕೀಯ ದುರೀಣ, ಸಮಾಜಸೇವಕ ಮೊಹಮ್ಮದ್ ರಫೀಕ್ ಅವರಿಗೆ ಏಷ್ಯಾ ಇಂಟರ್ನ್ಯಾಷನಲ್ ಕಲ್ಚರ್ ರೀಸರ್ಚ್ ಯುನಿವರ್ಸಿಟಿ ಇಂಟರ್ ನ್ಯಾಷನಲ್ ಅಕ್ರೆಡಿಟೇಷನ್ ಸಂಸ್ಥೆಯಿಂದ ರಾಜಕೀಯ ಮತ್ತು ಸಾಮಾಜೀಕ ಸೇವೆಯನ್ನು ಪರಿಗಣಿಸಿ ಗೌರವ ಡಾಕ್ಟರೇಟ್ ಪ್ರಧಾನ ಮಾಡಿದೆ.
ಶನಿವಾರ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗಿದೆ.
ಮೊಹಮ್ಮದ್ ರಫೀಕ್ ಕಳೆದ ಇಪ್ಪತ್ತು ವರ್ಷಗಳಿಂದ ಸಾರ್ವಜನಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು, ಕಳೆದ 18 ವರ್ಷಗಳಿಂದ ರಾಜಕೀಯ ಪ್ರವೇಶಿಸಿ ಜೆಡಿಎಸ್ ಪಕ್ಷದಲ್ಲಿ ಸಕ್ರೀಯವಾಗಿದ್ದರು.2015ರಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾಗಿ 2015ರಲ್ಲಿ ಕಳಸ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾಗಿದ್ದರು.2016ರಲ್ಲಿ ಮೂಡಿಗೆರೆ ತಾ.ಪಂ ಸದಸ್ಯರಾಗಿ ಆಯ್ಕೆಯಾಗಿದ್ದರು.ಅಲ್ಲದೆ ಕಳಸ ಜೆಡಿಎಸ್ ಪಕ್ಷದ ಅಧ್ಯಕ್ಷರಾಗಿ ಪಕ್ಷವನ್ನು ಗಟ್ಟಿಗೊಳಿಸುವಲ್ಲಿ ಪ್ರಧಾನ ಪಾತ್ರವಹಿಸಿದ್ದರು.
ಪ್ರಸ್ತುತ ಕಾಂಗ್ರೇಸ್ ಪಕ್ಷದಲ್ಲಿ ಸಕ್ರೀಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಾ ಕಳಸ ಕರ್ನಾಟಕ ಪಬ್ಲಿಕ್ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಕಳಸ ಕಾಫೀ ಕ್ಯೂರಿಂಗ್ ನಡೆಸಿಕೊಂಡು ರಾಜಕೀಯ, ಸಾರ್ವಜನಿಕ ಕೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಊರಿನ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದ್ದಾರೆ.
