ಕಳಸ ಲೈವ್ ವರದಿ
ನಾಳೆ (ಎ 10) ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-1 ಫಲಿತಾಂಶವನ್ನು ಪ್ರಕಟ ಮಾಡಲಾಗುತ್ತಿದೆ.ಅಧಿಕೃತ ವೆಬ್ ಸೈಟ್ https://karresults.nic.in ಬೆಳಿಗ್ಗೆ 11 ಗಂಟೆಯ ನಂತರ ಫಲಿತಾಂಶ ಲಭ್ಯವಾಗಲಿದೆ.
ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಯಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕೃತ ಮಾಹಿತಿಯನ್ನು ಪ್ರಕಟಿಸಿದೆ.