ಕಳಸ ಲೈವ್ ವರದಿ
ಕಳಸದ ಕಂಚಿನಕೆರೆ ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾತ್ಯಾಯಿನಿ(55) ಅನಾರೋಗ್ಯದಿಂದ ಭಾನುವಾರ ನಿಧನರಾಗಿದ್ದಾರೆ.
ಕಳೆದ 27 ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದು, ಕಳೆದ ಕೆಲ ವರ್ಷಗಳಿಂದ ಕಂಚಿನಕೆರೆ ಅಂಗನವಾಡಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಕಳೆದ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು.
ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇವರು ಭಾನುವಾರ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
