ಕಳಸ ಲೈವ್ ವರದಿ
ಕಳಸ ತಾಲೂಕಿನ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ಹಾಗೂ ಕಾರ್ಯಕರ್ತರ ಲೋಕಸಭಾ ಚುನಾವಣೆ ಅವಲೋಕನ ಸಭೆ ಮತ್ತು ಕಾರ್ಯಕರ್ತರಿಗೆ ಧನ್ಯವಾದ ಸಭೆ ಸೋಮವಾರ ನಡೆಯಿತು.

ಕಳಸದ ರೊಟರಿ ಸಭಾ ಭವನದಲ್ಲಿ ಅಧ್ಯಕ್ಷ ಕಳಸ ಬಿಜೆಪಿ ಅಧ್ಯಕ್ಷ ನಾಗಭೂಷನ್ ಅವರ ಅಧ್ಯಕ್ಷತೆ ಎಲ್ಲಾ ಕಾರ್ಯಕರ್ತರನ್ನು ಅಭಿನಂದಿಸಲಾಯಿತು.
ಚುನಾವಣೆ ಯಲ್ಲಿ ಸಕ್ರಿಯವಾಗಿ ಪಾಲ್ಗೊಂಡ ಕಾರ್ಯಕರ್ತರನ್ನು ಅಭಿನಂದಿಸಿ ಮಾತನಾಡಿದ ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷ ಎಂ.ಎ ಶೇಷಗಿರಿ, ಈ ಚುನಾವಣೆ ಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸುವ ಬಗ್ಗೆ ವಿಶ್ವಾಸವನ್ನು ವ್ಯಕ್ತಪಡಿಸಿ, ಜೆಡಿಎಸ್ ಪಕ್ಷದ ಎಲ್ಲಾ ನಾಯಕರ ಮತ್ತು ಕಾರ್ಯಕರ್ತರ ಸಹಕಾರಕ್ಕೆ ವಂದಿಸಿದರು.

ಜೆಡಿಎಸ್ ಮುಖಂಡ ಜಿ.ಕೆ ಮಂಜಪ್ಪಯ್ಯ ಮಾತನಾಡಿ ಮುಂದೆಯು ಬಿಜೆಪಿ ಜೆಡಿಎಸ್ ಒಟ್ಟಾಗಿ ಇದೇ ರೀತಿ ಎಲ್ಲಾ ಚುನಾವಣೆ ಹಾಗೂ ಊರಿನ ಅಭಿವೃದ್ಧಿಯಲ್ಲಿ ಒಟ್ಟಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ಕಳಸ ಗ್ರಾ.ಪಂ ಅಧ್ಯಕ್ಷೆ ಉಷಾ ವಿಶ್ವನಾಥ್, ಉಪಾಧ್ಯಕ್ಷ ರಂಗನಾಥ್, ಮಾಜಿ ಅಧ್ಯಕ್ಷೆ ಸುಜಯ ಸದಾನಂದ, ಬಿಜೆಪಿ ಯೂತ್ ಅಧ್ಯಕ್ಷ ಬಿ.ಕೆ.ಮಹೇಶ್ ಮುಖಂಡರಾದ ನಾಗೇಶ್ ಭಟ್, ಶ್ರೀಕಾಂತ್, ಪ್ರದೀಪ್, ಜೆಡಿಎಸ್ ಮುಖಂಡರಾದ ಜ್ವಾಲನಯ್ಯ, ಆಶಾಲತಾ ಜೈನ್ ಹಾಗೂ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಇದ್ದರು.
