
ಕಳಸ ಲೈವ್ ವರದಿ
ತಾಲ್ಲೂಕಿನ ತೋಟದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಗ್ಗನಳ್ಳ ಸತೀಶ(25) ಎಂಬ ವ್ಯಕ್ತಿ ಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು, ಈ ಬಗ್ಗೆ ಕಗ್ಗನಳ್ಳ ಭದ್ರಾ ನದಿಯಲ್ಲಿ ಸತೀಶನ ಪತ್ತೆಗಾಗಿ ಅಗ್ನಿಶ್ಯಾಮಕ ದಳ, ಕಳಸ ಪೊಲೀಸರು ಹಾಗೂ ಸ್ಥಳೀಯರು ಹುಡುಕಾಟ ನಡೆಸುತ್ತಿದ್ದಾರೆ.
ತಂದೆ ತಾಯಿ ಇಬ್ಬರನ್ನು ಕಳೆದುಕೊಂಡಿದ್ದ ಸತೀಶ ತನ್ನ ಅಕ್ಕನೊಂದಿಗೆ ಕಗ್ಗನಳ್ಳದಲ್ಲಿ ವಾಸ ಇದ್ದರು ಎನ್ನಲಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

