
ಕಳಸ ಲೈವ್ ವರದಿ
ಬಣಕಲ್-ಕೊಟ್ಟಿಗೆಹಾರ ನಡುವೆ ಶುಕ್ರವಾರ ಮಧ್ಯಾಹ್ನ ಮೆಸ್ಕಾಂ ಲಾರಿ ಓಮ್ನಿ ಆಲ್ಟೋ ಕಾರ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು ನಾಲ್ವರು ಸಾವನ್ನಪ್ಪಿದ್ದಾರೆ.
ಧರ್ಮಸ್ಥಳದಿಂದ ಚಿತ್ರದುರ್ಗಕ್ಕೆ ಹೋಗುತ್ತಿದ್ದ ಓಮಿನಿ ಕಾರು, ಮೂಡಿಗೆರೆಯಿಂದ ಕೊಟ್ಟಿಗೆಹಾರಕ್ಕೆ ಬರುತ್ತಿದ್ದ ಮೆಸ್ಕಾಂ ಲಾರಿ ನಡುವೆ ಅಪಘಾತ ಸಂಭವಿಸಿದೆ.ಹಿಂಬದಿಯಲ್ಲಿದ್ದ ಆಲ್ಟೋ ಕಾರು ಓಮ್ನಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ.
ಅಪಘಾತದ ರಭಸಕ್ಕೆ ಓಮ್ನಿಯಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ ಓರ್ವ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ.