ಕಳಸ ಲೈವ್ ವರದಿ
ಕಳಸ ತಾಲೂಕಿನ ಹಳುವಳ್ಳಿ ತಾರಿಕೊಂಡ ನಿವಾಸಿ ರಮ್ಯಾ(21) ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಂತಿಮ ಹಂತದ ಡಿಗ್ರಿ ವ್ಯಾಸಂಗ ಮಾಡುತ್ತಿದ್ದ ಇವರು ಶನಿವಾರವಷ್ಟೆ ತನ್ನ 21ನೇ ವರ್ಷದ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದರು.
ಭಾನುವಾರ ಪೋಷಕರೆಲ್ಲ ತಮ್ಮ ಹತ್ತಿರದ ನೆಂಟರೊಬ್ಬರ ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದರು.ಮದುವೆ ಮುಗಿಸಿಕೊಂಡು ಮನೆಗೆ ಬಂದಾಗ ರಮ್ಯಾ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ಮೃತದೇಹವನ್ನು ಕಳಸ ಸರ್ಕಾರಿ ಆಸ್ಪತ್ರೆಗೆ ತರಲಾಗಿದ್ದು, ಘಟನೆಗೆ ಕಾರಣ ತಿಳಿದು ಬಂದಿಲ್ಲ.
