

ಕಳಸ ಲೈವ್ ವರದಿ
ಅಡಕೆ ತೋಟದಲ್ಲಿ ಕಾಣಿಸಿಕೊಂಡಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಕಳಸ ಹವ್ಯಾಸಿ ಉರಗ ಪ್ರೇಮಿ ರಿಜ್ವಾನ್ ಹಿಡಿದು ಕಾಡಿಗೆ ಬಿಟ್ಟರು.
ಸುಂಕಸಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುಗುಳ ಮನೆ ಲೋಕಪ್ಪ ಎಂಬುವವರ ಅಡಿಕೆ ತೋಟದಲ್ಲಿ ತೋಟಕ್ಕೆ ಔಷಧಿ ಸಿಂಪಡಣೆ ಮಾಡುವ ಸಂದರ್ಭದಲ್ಲಿ ಹೆಬ್ಬಾವು ಕಾಣಿಸಿಕೊಂಡಿದೆ. ಕೂಡಲೇ ಅರಣ್ಯ ಇಲಾಖೆಗೆ ತಿಳಿಸಿದ್ದರು.
ನಂತರ ಕಳಸ ರಿಜ್ವಾನ್ ಬಂದು ಹೆಬ್ಬಾವನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟರು.


