
ಕಳಸ ಲೈವ್ ವರದಿ
ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಳಸದಲ್ಲಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.
ಫಲಿತಾಂಶ ಹೊರಬೀಳುತ್ತಿದ್ದಂತೆ ಬಿಜೆಪಿ ಜೆಡಿ ಎಸ್ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತು.ಪಟ್ಟಣದಲ್ಲಿ ಕಾರ್ಯಕರ್ತರು ಮೆರವಣಿಗೆ ನಡೆಸಿ ಪಟಾಕಿ ಸಿಡಿಸಿ ಜಯಕಾರ ಹಾಕಿದರು.
ಕಳಸ ಭಾಜಪ ಶಕ್ತಿ ಕೇಂದ್ರದ ಅಧ್ಯಕ್ಷ ನಾಗಭೂಷಣ್, ಜೆಡಿಎಸ್ ಅಧ್ಯಕ್ಷ ಸಂತೋಷ್ ಹಿನಾರಿ, ಪಕ್ಷದ ಮುಖಂಡರುಗಳಾದ ಎಂ.ಎ.ಶೇಷಗಿರಿ, ಜಿ.ಕೆ. ಮಂಜಪ್ಪಯ್ಯ, ಜ್ವಾಲನಯ್ಯ, ಸುಜಯ ಸದಾನಂದ, ನಾಗೇಶ್ ಭಟ್, ಬಿ.ಕೆ.ಮಹೇಶ್, ರಂಗನಾಥ್ ಕಚಗಾನೆ, ಉಷಾ ವಿಶ್ವನಾಥ್ ಮತ್ತಿತರು ಇದ್ದರು.




