
ಕಳಸ ಲೈವ್ ವರದಿ
ತಾಲೂಕಿನ ಮರಸಣಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಡೂರು ನಿವಾಸಿ ಪ್ರಶಾಂತ್(26) ಎಂಬ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೈಟಿಂಗ್ ಕೆಲಸ ಮಾಡಿಕೊಂಡಿದ್ದ ಪ್ರಶಾಂತ್ ಬುಧವಾರ ಹಿರೇಬೈಲು ಪಟ್ಟಣದಲ್ಲಿ ವಿಷ ಸೇವಿಸಿದ್ದರು. ಸುದ್ದಿ ತಿಳಿದ ಕೂಡಲೇ ಕಳಸ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ.
ಘಟನೆಗೆ ಕಾರಣ ತಿಳಿದು ಬಂದಿಲ್ಲ, ಮೃತನ ಅಣ್ಣ ಕಳೆದ ಒಂದು ವರ್ಷದ ಹಿಂದೆಯಷ್ಟೆ ಅನಾರೋಗ್ಯದಿಂದ ಮೃತರಾಗಿದ್ದರು.