
ಕಳಸ ಲೈವ್ ವರದಿ
ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರು ಕಳಸ ಪಟ್ಟಣಕ್ಕೆ ಒಂದು ಇಂದಿರಾ ಕ್ಯಾಂಟೀನ್ ಮಂಜೂರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಕ್ಷೇತ್ರದ ಸಮಸ್ಯೆಗಳನ್ನು ಹೇಳಿಕೊಳ್ಳಲು ಶಾಸಕರ ಭೇಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವಕಾಶ ಮಾಡಿಕೊಟ್ಟಿದ್ದಾರೆ.
ಇನ್ನು ಜುಲೈ 15ರಿಂದ ಸದನ ಪ್ರಾರಂಭವಾಗುತ್ತಿದೆ.
ನಮ್ಮ ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಅತಿಹೆಚ್ಚು ಕಾರ್ಮಿಕರು ಕೆಲಸ ಮಾಡುವ ಪಟ್ಟಣವಾದ ಕಳಸದಲ್ಲಿ ಇಂದಿರಾ ಕ್ಯಾಂಟೀನ್ ಮಂಜೂರು ಮಾಡುವಂತೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.
ಇಂದಿರಾ ಕ್ಯಾಂಟೀನ್ ಸ್ಥಾಪನೆಯ ಮೂಲ ಉದ್ದೇಶವೇ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಕಡಿಮೆ ಹಣಕ್ಕೆ ಹೊಟ್ಟೆ ತುಂಬಾ ಆಹಾರ ನೀಡುವುದಾಗಿದೆ. ಇನ್ನು ನಮ್ಮ ಕ್ಷೇತ್ರದಲ್ಲಿ ಕೂಲಿ ಕಾರ್ಮಿಕರು ಹೆಚ್ಚಿರುವ ಹಿನ್ನೆಲೆಯಲ್ಲಿ ಕಳಸ ಪಟ್ಟಣಕ್ಕೆ ಒಂದು ಇಂದಿರಾ ಕ್ಯಾಂಟೀನ್ ಕೇಳಿದ್ದೇನೆ ಎಂದು ತಿಳಿಸಿದ್ದಾರೆ.