ಕಳಸ ಲೈವ್ ವರದಿ
ಮಲೆನಾಡಿನಾಧ್ಯಂತ ಭಾರೀ ಮಳೆಯಾಗುತಿದ್ದು ಭಾರತೀಯ ಹವಾಮಾನ ಇಲಾಖೆ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಿಗೆ ಜುಲೈ 16 ಮಂಗಳವಾರ ರಜೆ ಘೋಷಿಸಲಾಗಿದೆ.
ಈ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಖಾಸಗಿ ಪ್ರಾಥಮಿಕ ಪ್ರೌಢಶಾಲೆಗಳಿಗೆ ಮಳೆ ಹಿನ್ನೆಲೆಯಲ್ಲಿ ರಜೆ ಘೋಷಿಸಿ ಜಿಲ್ಲಾಧಿಕಾರಿ ಶ್ರೀಮತಿ ಮೀನಾ ನಾಗರಾಜ್ ಆದೇಶ ನೀಡಿದ್ದಾರೆ.
